Chikkodi

ಸಾರ್ವಜನಿಕವಾಗಿ ಮಾರಕಾಸ್ತ್ರ ಪ್ರದರ್ಶಿಸಿ ಸಾರ್ವಜನಿಕರಲ್ಲಿ ಭೀತಿ ಹುಟ್ಟಿಸಿದ ಗಡಿಪಾರು ಕ್ರಿಮಿಗಳು: ಯುವಕನ ಮೇಲೆ ಹಲ್ಲೆ

Share

ಗಣೇಶ ಚತುರ್ಥಿಯ ಸಂಭ್ರಮದ ನಡುವೆಯೇ ಸಾರ್ವಜನಿಕ ಸ್ಥಳದಲ್ಲಿ ಮಾರಕಾಸ್ತ್ರಗಳನ್ನು ಪ್ರದರ್ಶಿಸಿ ಸಾರ್ವಜನಿಕರಲ್ಲಿ ತೀವ್ರ ಆತಂಕ ಸೃಷ್ಟಿಸಿದ್ದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಕಾರದಗಾ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಪುಡಿ ರೌಡಿಗಳ ಅಟ್ಟಹಾಸಕ್ಕೆ ಗ್ರಾಮಸ್ಥರು ಬೆಚ್ಚಿಬಿದ್ದಿದ್ದಾರೆ.

ಮಹಾರಾಷ್ಟ್ರದ ಕೊಲ್ಲಾಪುರ ಜಿಲ್ಲೆಯ ಹುಪರಿ ಗ್ರಾಮದಿಂದ ಗಡಿಪಾರಾಗಿದ್ದ ಅಪರಾಧ ಹಿನ್ನೆಲೆಯ ನೀತಿನ್ ಹುಕುರೆ (35), ಅನಿಲ್ (26) ಹಾಗೂ ನಿರಂಜನ್ (22) ಎಂಬ ಯುವಕರೇ ಈ ಕೃತ್ಯ ಎಸಗಿದ ಆರೋಪಿಗಳು. ಗಣೇಶ ಚತುರ್ಥಿಯ ದಿನದಂದು ಕಾರದಗಾ ಗ್ರಾಮದಲ್ಲಿ ಸಾರ್ವಜನಿಕವಾಗಿ ಲಾಂಗು ಮತ್ತು ಡ್ರ್ಯಾಗರ್‌ಗಳನ್ನು ಕೈಯಲ್ಲಿ ಹಿಡಿದು ಅಡ್ಡಾಡಿದ ಈ ರೌಡಿಗಳು, ಜನರಲ್ಲಿ ಭಯದ ವಾತಾವರಣ ನಿರ್ಮಿಸಿದ್ದಾರೆ.

ಅಷ್ಟೇ ಅಲ್ಲದೆ, ಅದೇ ಗ್ರಾಮದ ತೇಜಸ್ ಬೀಡಿಕರ್ ಎಂಬ ಯುವಕನ ಮೇಲೆ ಈ ಪುಡಿ ರೌಡಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದಾರೆ. ಗಡಿಪಾರಾಗಿದ್ದರೂ ಕಾನೂನಿಗೆ ಕ್ಯಾರೆ ಅನ್ನದೆ ಗಡಿ ದಾಟಿ ಬಂದು ಗೂಂಡಾಗಿರಿ ನಡೆಸಿದ ಈ ಕ್ರಿಮಿಗಳ ವಿರುದ್ಧ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ.

ಈ ಸಂಬಂಧ ಸದಲಗಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಸಾರ್ವಜನಿಕರ ಶಾಂತಿ ಭಂಗಗೊಳಿಸಿ ಹಲ್ಲೆ ನಡೆಸಿದ ಆರೋಪಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲು ಸಾರ್ವಜನಿಕರು ಆಗ್ರಹಿಸಿದ್ದಾರೆ.

Tags:

error: Content is protected !!