Dharwad

5ನೇ ದಿನಕ್ಕೆ ಕಾಲಿಟ್ಟ ಧಾರವಾಡದಲ್ಲಿನ KPSC ವಿರುದ್ಧದ ಹೋರಾಟ

Share

KPSC ಅಕ್ರಮವನ್ನು ಸಿಬಿಐ ತನಿಖೆಗೆ ವಹಿಸುವಂತೆ ಆಗ್ರಹಿಸಿ ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ನಡೆಯುತ್ತಿರುವ ವಿದ್ಯಾರ್ಥಿಗಳ ಹೋರಾಟ ಐದನೇ ದಿನಕ್ಕೆ ಕಾಲಿಟ್ಟಿದ್ದು, ಉಪವಾಸ ಸತ್ಯಾಗ್ರಹವು ಈಗ 3ನೇ ದಿನಕ್ಕೆ ಕಾಲಿಟ್ಟಿದೆ.

– ಧಾರವಾಡ ವಿದ್ಯಾರ್ಥಿಗಳ ಒಕ್ಕೂಟದ ನೇತೃತ್ವದಲ್ಲಿ ಪ್ರತಿಭಟನೆ ಮುಂದುವರಿದಿದ್ದು, ಕೆಪಿಎಸ್‌ಸಿ ಪಶು ವೈದ್ಯಕೀಯ ಅಕ್ರಮದ ತನಿಖೆಯನ್ನು ಸಿಬಿಐಗೆ ವಹಿಸುವವರೆಗೆ ಹೋರಾಟ ಕೈಬಿಡುವುದಿಲ್ಲ ಎಂದು ಪ್ರತಿಭಟನಾಕಾರರು ಪಟ್ಟು ಹಿಡಿದಿದ್ದಾರೆ. ಇದೇ ವೇಳೆ ಉಪವಾಸ ಸತ್ಯಾಗ್ರಹ ಮೂರನೇ ದಿನಕ್ಕೆ ಕಾಲಿಟ್ಟಿದ್ದು, ಅನಿಲ ಕಾಂಬಳೆ ಅವರು ಉಪವಾಸ ಧರಣಿ ಮುಂದುವರಿಸಿದ್ದಾರೆ. ಧರಣಿ ಸ್ಥಳಕ್ಕೆ ಆರೋಗ್ಯ ಇಲಾಖೆಯ ಸಿಬ್ಬಂದಿ ಭೇಟಿ ನೀಡಿ ಅನಿಲ ಕಾಂಬಳೆ ಅವರ ಆರೋಗ್ಯ ವಿಚಾರಿಸಿದರು. KPSC ಅಕ್ರಮದ ಕುರಿತು ಸಿಬಿಐ ತನಿಖೆಗೆ ವಹಿಸುವಂತೆ ಆಗ್ರಹಿಸಿ ಪ್ರತಿಭಟನಾಕಾರರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

Tags:

error: Content is protected !!