Khanapur

ಬೀಡಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಸಾರ್ವಜನಿಕರಿಗೆ ಇದರ ಸದುಪಯೋಗ

Share

ಖಾನಾಪೂರ ತಾಲೂಕಿನ ಪೂರ್ವ ಭಾಗದ ಬೀಡಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕೆಎಲ್ ಇ ಕ್ಯಾನ್ಸರ್ ಹಾಸ್ಪಿಟಲ್ ವತಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಏರ್ಪಡಿಸಲಾಗಿತ್ತು ವಿವಿಧ ತಜ್ಞ ವೈದ್ಯರಿಂದ ಬಿಪಿ ಶುಗರ್ ಸೇರಿದಂತೆ ದೈಹಿಕ ಪರೀಕ್ಷೆ,ಬಾಯಿಯ ತಪಾಸಣೆ ಸೇರಿದಂತೆ ವಿವಿಧ ವಿಧಾನಗಳ ಮೂಲಕ ತಪಾಸಣೆ ನಡೆಸಿ ಯೋಗ್ಯ ಚಿಕಿತ್ಸೆಯ ಬಗ್ಗೆ ಸಲಹೆ ಸೂಚನೆಗಳನ್ನು ನೀಡಲಾಯಿತು ತಾಲೂಕಾ ಆರೋಗ್ಯಾಧಿಕಾರಿ ಡಾಕ್ಟರ್ ಮಹೇಶ್ ಕಿವಡಸನ್ನವರ, ಬೀಡಿ ಪ್ರಾಥಮಿಕ ಆರೋಗ್ಯ ಕೇಂದ್ರದ ಮುಖ್ಯ ವೈದ್ಯಾಧಿಕಾರಿ ಡಾ ಪೈ ಸೇರಿದಂತೆ ಇನ್ನಿತರರು ರೋಗಿಗಳಿಗೆ ಇದರ ಬಗ್ಗೆ ಮಾಹಿತಿ ನೀಡಿ ಸ್ಪಂದಿಸುವ ಕಾರ್ಯ ಮಾಡಿದರು ಬೆಳಗಾವಿಯಿಂದ ಬಂದಂತಹ ಅನುಭವಿ ತಜ್ಞ ವೈದ್ಯರ ಸಲಹೆ ಸೂಚನೆಗಳನ್ನು ಸಾರ್ವಜನಿಕರು ಆಲಿಸುವ ತಮ್ಮ ಆರೋಗ್ಯದ ಬಗ್ಗೆ ಸಲಹೆ ಸೂಚನೆಗಳನ್ನು ಪಡೆದುಕೊಂಡರು ಬೀಡಿ ಸೇರಿದಂತೆ ಅಕ್ಕಪಕ್ಕದ ಗ್ರಾಮಸ್ಥರು ಈ ಉಚಿತ ಆರೋಗ್ಯ ತಪಾಸಣಾ ಶಿಬಿರದ ಸದುಪಯೋಗವನ್ನು ಪಡೆದುಕೊಂಡರು.

ಅಲ್ತಾಫ್ ಎಂ ಬಸರೀಕಟ್ಟಿ
ಇನ್ ನ್ಯೂಸ್ ಖಾನಾಪೂರ

Tags:

error: Content is protected !!