BALLARI

ಮನೆಯೊಳಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನ-ಬೆಳ್ಳಿ ಕಳ್ಳತನ!

Share

ಬಳ್ಳಾರಿಯಲ್ಲಿ ಕಳ್ಳರ ಕೈಚಳಕ ಮುಂದುವರಿದಿದ್ದು, ತಡರಾತ್ರಿ ಕುಟುಂಬಸ್ಥರು ಗಾಢ ನಿದ್ರೆಯಲ್ಲಿದ್ದಾಗ ಮನೆಯ ಕಿಟಕಿ ಬಾಗಿಲು ಒಡೆದು ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನ ಹಾಗೂ ಬೆಳ್ಳಿ ಆಭರಣಗಳನ್ನು ದೋಚಿ ಪರಾರಿಯಾಗಿರುವ ಘಟನೆ ವರದಿಯಾಗಿದೆ.

ಬಳ್ಳಾರಿ ನಗರದ ಇನ್ನಾರೆಡ್ಡಿ ಕಾಲೋನಿಯ ನಿವಾಸಿ ಎಂ. ಶ್ರೀಧರ ಎಂಬುವವರ ಮನೆಯಲ್ಲಿ ತಡರಾತ್ರಿ ಈ ಕಳ್ಳತನ ನಡೆದಿದೆ. ಕುಟುಂಬಸ್ಥರು ಮನೆಯಲ್ಲಿ ಮಲಗಿದ್ದ ವೇಳೆ ಕಿಟಕಿ ಮತ್ತು ಬಾಗಿಲು ಒಡೆದು ಒಳನುಗ್ಗಿದ ಖದೀಮರು, ಸುಮಾರು 16 ಲಕ್ಷ ರೂ. ಮೌಲ್ಯದ 211 ಗ್ರಾಂ ಚಿನ್ನಾಭರಣ ಹಾಗೂ 2 ಲಕ್ಷ 16 ಸಾವಿರ ರೂ. ಮೌಲ್ಯದ 1200 ಗ್ರಾಂ ಬೆಳ್ಳಿಯ ಆಭರಣಗಳನ್ನು ದೋಚಿ ಪರಾರಿಯಾಗಿದ್ದಾರೆ. ಇವರ ಈ ಕೃತ್ಯ ಸಮೀಪದ ಸಿಸಿಟಿವಿ ಕ್ಯಾಮೆರಾಗಳಲ್ಲಿ ಸೆರೆಯಾಗಿದ್ದು, ಮಾಹಿತಿ ತಿಳಿದ ಕೂಡಲೇ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿರುವ ಕೌಲಬಜಾರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಪತ್ತೆಗಾಗಿ ತನಿಖೆ ಮುಂದುವರಿಸಿದ್ದಾರೆ.

Tags:

error: Content is protected !!