State

ಜನರ ಬಳಿಗೆ ಸರ್ಕಾರ: ನಾಳೆಯಿಂದ ‘ಪ್ರಜಾಸೇವಾ ಇಲಾಖೆ’ ಆರಂಭ; ಡಿ.ಕೆ. ಶಿವಕುಮಾರ್ ಘೋಷಣೆ

Share

ರಾಜ್ಯದ ಜನತೆಯ ಕುಂದುಕೊರತೆಗಳನ್ನು ನೇರವಾಗಿ ಆಲಿಸಿ ಪರಿಹಾರ ಕಲ್ಪಿಸಲು ಸಿಎಂ ಡಿ.ಕೆ. ಶಿವಕುಮಾರ್ ಮಹತ್ವದ ಹೆಜ್ಜೆ ಇಟ್ಟಿದ್ದಾರೆ. ನಾಳೆಯಿಂದ ದೇಶಕ್ಕೆ ಮಾದರಿಯಾಗುವಂತೆ ‘ಪ್ರಜಾಸೇವಾ ಇಲಾಖೆ’ ಆರಂಭಿಸುವುದಾಗಿ ಅವರು ತಿಳಿಸಿದ್ದಾರೆ.

ಬಾಗಲಕೋಟೆಯ ಕೂಡಲಸಂಗಮದ ಸಂಗಮನಾಥ ದೇಗುಲದಲ್ಲಿ ಶುಕ್ರವಾರ ಪೂಜೆ ಸಲ್ಲಿಸಿ, ಘಟಪ್ರಭಾ, ಮಲ್ಲಪ್ರಭಾ ಮತ್ತು ಕೃಷ್ಣಾ ನದಿ ಸಂಗಮದಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಅವರು ಬಾಗಿನ ಸಮರ್ಪಿಸಿದರು. ನಂತರ ಕೂಡಲಸಂಗಮದ ಬಸವ ವೇದಿಕೆ ಸಭಾ ಭವನಕ್ಕೂ ಭೇಟಿ ನೀಡಿ ಸಮಾಲೋಚನೆ ನಡೆಸಿದರು.


ರಾಜ್ಯದ ಮೂಲೆಮೂಲೆಗಳಿಂದ ಸಾರ್ವಜನಿಕರು ಮತ್ತು ರೈತರು ತಮ್ಮ ಕುಂದುಕೊರತೆಗಳೊಂದಿಗೆ ಅಲೆಯುವುದನ್ನು ತಪ್ಪಿಸಲು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮಾಧ್ಯಮಗಳೊಂದಿಗೆ ಮಾತನಾಡುತ್ತಾ ಹೊಸ ಆಡಳಿತಾತ್ಮಕ ಸುಧಾರಣೆಯನ್ನು ಪ್ರಕಟಿಸಿದ್ದಾರೆ. ಪ್ರತಿ ತಿಂಗಳು ಎರಡು ಶನಿವಾರಗಳ ಕಾಲ ಎಲ್ಲಾ ಸಚಿವರು ಕಡ್ಡಾಯವಾಗಿ ವಿವಿಧ ತಾಲೂಕುಗಳಿಗೆ ಭೇಟಿ ನೀಡಿ ಜನರ ಅಹವಾಲುಗಳನ್ನು ಸ್ವೀಕರಿಸಲಿದ್ದಾರೆ. ಇದರ ಮುಂದುವರಿದ ಭಾಗವಾಗಿ, ಸ್ಥಳೀಯ ಮಟ್ಟದ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಗ್ರಾಮಗಳಿಗೆ ತೆರಳಿ ಸಮಸ್ಯೆಗಳನ್ನು ಬಗೆಹರಿಸಲಿದ್ದಾರೆ ಎಂದು ಅವರು ಸ್ಪಷ್ಟಪಡಿಸಿದರು.

ಇದೇ ವೇಳೆ, ಕಸ್ತೂರಿ ರಂಗನ್ ವರದಿ ವಿಚಾರವಾಗಿ ರಾಜ್ಯ ಸರ್ಕಾರದ ನಿಲುವನ್ನು ಸಮರ್ಥಿಸಿಕೊಂಡ ಡಿಸಿಎಂ, ಸರ್ಕಾರದ ಅಧಿಸೂಚನೆಗೆ ಸಂಬಂಧಿಸಿದಂತೆ ಆಕ್ಷೇಪಣೆ ಸಲ್ಲಿಸಲು 60 ದಿನಗಳ ಕಾಲಾವಕಾಶವಿದ್ದು, ಈ ಗಂಭೀರ ವಿಷಯದಲ್ಲಿ ವಿರೋಧ ಪಕ್ಷದವರು ಮೊದಲು ತಮ್ಮ ನಿಲುವೇನು ಎಂಬುದನ್ನು ಸ್ಪಷ್ಟಪಡಿಸಬೇಕು ಎಂದು ಸವಾಲು ಹಾಕಿದರು..

ಈ ವೇಳೆ ವಿಧಾನಸಭೆ ಉಪಸಭಾಧ್ಯಕ್ಷ ಮಾಂಕಾಳ ವೈದ್ಯ, ಸಚಿವ ವಿಜಯಾನಂದ ಕಾಶಪ್ಪನವರ್, ಸಂಸದ ಡಾ. ಜಿ.ಸಿ. ಚಂದ್ರಶೇಖರ್, ಶಾಸಕರಾದ ಆರ್.ಬಿ. ತಿಮ್ಮಾಪುರ, ಜೆ.ಟಿ. ಪಾಟೀಲ್, ಭೀಮಸೇನ್ ಚಿಮ್ಮನಕಟ್ಟಿ ಹಾಗೂ ವೀಣಾ ಕಾಶಪ್ಪನವರ್ ಸೇರಿದಂತೆ ಮುಖಂಡರು ಉಪಸ್ಥಿತರಿದ್ದು,

Tags:

error: Content is protected !!