Vijaypura

ವಿಜಯಪುರದಲ್ಲಿ ಮತ್ತೆ ಗುಂಡಿನ ಮೊರೆತ; ವ್ಯಕ್ತಿಯ ಮೇಲೆ ಎರಡು ಸುತ್ತು ಗುಂಡಿನ ದಾಳಿ

Share

ಜಿಲ್ಲೆಯಲ್ಲಿ ಮತ್ತೆ ಗುಂಡಿನ ಸದ್ದು ಕೇಳಿಬಂದಿದ್ದು, ವ್ಯಕ್ತಿಯೊಬ್ಬರ ಮೇಲೆ ಎರಡು ಸುತ್ತು ಗುಂಡಿನ ದಾಳಿ ನಡೆಸಿರುವ ಘಟನೆ ಕೊಲ್ಹಾರ ತಾಲೂಕಿನ ಮಟ್ಯಾಳ ಗ್ರಾಮದಲ್ಲಿ ನಡೆದಿದೆ.

ಮಟ್ಯಾಳ ಗ್ರಾಮದ ಸುಖದೇವ ಎಂಬುವವರ ಮೇಲೆ ಸಂಗಪ್ಪ ಪೂಜಾರಿ ಎಂಬಾತ ಪರವಾನಗಿ ಹೊಂದಿರುವ ರಿವಾಲ್ವಾರ್‌ನಿಂದ ಎರಡು ಸುತ್ತು ಗುಂಡು ಹಾರಿಸಿದ್ದಾನೆ ಎನ್ನಲಾಗಿದೆ. ಗುಂಡುಗಳು ಸುಖದೇವ ಅವರ ಹೊಟ್ಟೆ ಹಾಗೂ ಬೆನ್ನಿನ ಭಾಗಕ್ಕೆ ತಗುಲಿದ್ದು, ಗಂಭೀರ ಗಾಯಗೊಂಡ ಅವರನ್ನು ಚಿಕಿತ್ಸೆಗಾಗಿ ವಿಜಯಪುರ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.

ಘಟನೆ ಬಳಿಕ ಆರೋಪಿ ಸಂಗಪ್ಪ ಪೂಜಾರಿ ಸ್ಥಳದಿಂದ ಪರಾರಿಯಾಗಿದ್ದಾನೆ. ವೈಯಕ್ತಿಕ ವೈಷಮ್ಯದ ಹಿನ್ನೆಲೆಯಲ್ಲಿ ಗುಂಡಿನ ದಾಳಿ ನಡೆದಿರಬಹುದು ಎಂಬ ಶಂಕೆ ವ್ಯಕ್ತವಾಗಿದ್ದು, ನಿಖರ ಕಾರಣ ಪೊಲೀಸ್ ತನಿಖೆಯಿಂದ ತಿಳಿದುಬರಬೇಕಿದೆ.
ಘಟನಾ ಸ್ಥಳಕ್ಕೆ ಕೊಲ್ಹಾರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಆರೋಪಿಯ ಪತ್ತೆಗೆ ಮುಂದಾಗಿದ್ದಾರೆ. ಘಟನೆ ಕೊಲ್ಹಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

Tags:

error: Content is protected !!