Accident

ಹಾರೂಗೇರಿ ಬಳಿ ಭೀಕರ ರಸ್ತೆ ಅಪಘಾತ ; ಇಬ್ಬರ ಸ್ಥಿತಿ ಗಂಭೀರ

Share

ಕಾರು ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರಿಗೆ ಗಂಭೀರವಾಗಿ ಗಾಯಗೊಂಡ ಘಟನೆ ರಾಯಬಾಗ ತಾಲೂಕಿನ ಕೋಳಿಗುಡ್ಡ ಗ್ರಾಮದ ಹೊರವಲಯದಲ್ಲಿ ನಡೆದಿದೆ.

ಅಥಣಿ – ಗೋಕಾಕ್ ಮುಖ್ಯ ರಸ್ತೆಯ ಕೋಳಿಗುಡ್ಡ ಗ್ರಾಮದ ಹತ್ತಿರ ಅಪಘಾತ ಸಂಭವಿಸಿದ್ದು ಹಾರೂಗೇರಿ ಮೂಲದ ಬೈಕ್ ಸವಾರರು ಗಂಭೀರವಾಗಿ ಗಾಯಗೊಂಡಿದ್ದಾರೆ.

ರಕ್ತದ ಮಡುವಿನಲ್ಲಿ ಬಿದ್ದಿದ್ದ ಇಬ್ಬರು ಬೈಕ್ ಸವಾರರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ಅಪಘಾತದಲ್ಲಿ ಕಾರು ಚಾಲಕನ ನಿರ್ಲಕ್ಷ್ಯ ಎದ್ದುಕಾಣುತ್ತಿದ್ದು, ಹಾರೂಗೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

Tags:

error: Content is protected !!