hubbali

ಕಾರು ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಗಾಯಾಳು ಚಿಕಿತ್ಸೆ ಫಲಿಸದೆ ಸಾವು

Share

ಹುಬ್ಬಳ್ಳಿಯ ಸಪ್ತಗಿರಿ ನಗರದ ಜೆ ಕೆ ಶಾಲೆ ಬಳಿ ಕಾರು ಹಾಗೂ ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮಹಿಳೆ ಸಾವನ್ನಪ್ಪಿದ್ದಾರೆ.

ಹುಬ್ಬಳ್ಳಿಯ ಸಪ್ತಗಿರಿ ನಗರದ ಜೆ ಕೆ ಶಾಲೆ ಬಳಿ ಕಾರು ಹಾಗೂ ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ರೂಪಾ ಸೋಲಂಕಿ ಅವರನ್ನು ಕೂಡಲೇ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ರೂಪಾ ಸೋಲಂಕಿ ಮೃತಪಟ್ಟಿದ್ದಾರೆ.

ಇನ್ನು ಕಾರು ಹಾಗೂ ಬೈಕ್ ನಡುವೆ ನಡೆದ ಅಪಘಾತದ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಘಟನೆಯ ದೃಶ್ಯ ಇದೀಗ ಲಭ್ಯವಾಗಿವೆ. ಈ ಸಂಬಂಧ ಹುಬ್ಬಳ್ಳಿಯ ಉತ್ತರ ಸಂಚಾರಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ

Tags:

error: Content is protected !!