ಧಾರವಾಡ ಹೊರವಲಯದ ಸಿಂಗನಹಳ್ಳಿ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಫ್ಲಿಪ್‌ಕಾರ್ಟ್ ಕಂಪನಿಯ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟಿದ್ದು, ಮತ್ತೋರ್ವ ಗಾಯಗೊಂಡಿದ್ದಾನೆ. ಸಿಂಗನಹಳ್ಳಿ ಗ್ರಾಮದ ಬಳಿಯ ಕಂಪನಿಯಿಂದ ಲಾರಿ ಬೈಪಾಸ್‌ಗೆ ಏರಲು ಬಂದ ವೇಳೆ ಈ ದುರ್ಘಟನೆ ಸಂಭವಿಸಿದೆ. ಲಾರಿ ಬಲಕ್ಕೆ ತಿರುಗುತ್ತಿದ್ದಾಗ ಏಕಾಏಕಿ ಬೈಕ್ ಡಿಕ್ಕಿ ಹೊಡೆದಿದೆ.

ಡಿಕ್ಕಿಯ ರಭಸಕ್ಕೆ ಗಂಭೀರವಾಗಿ ಗಾಯಗೊಂಡಿದ್ದ ಬೈಕ್ ಸವಾರ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಮೃತಪಟ್ಟಿದ್ದಾನೆ. ಮತ್ತೋರ್ವ ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಧಾರವಾಡ ಗರಗ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಪಿ.ಎಸ್.ಐ. ಪ್ರವೀಣ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಅಪಘಾತಕ್ಕೆ ಕಾರಣವಾದ ಲಾರಿ ಹಾಗೂ ಬೈಕ್‌ನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಗರಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
