Bagalkote

ಟೈಯರ್ ಸ್ಫೋಟಗೊಂಡು ಅಂಡರ್‌ಪಾಸ್‌ನಲ್ಲಿ ಭೀಕರ ಲಾರಿ ಪಲ್ಟಿ!!!

Share

ಇಳಕಲ್ ನಗರದ ಬಸವೇಶ್ವರ ವೃತ್ತದ ಬಳಿ ಇರುವ ಸೊಲ್ಲಾಪುರ-ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಅಂಡರ್‌ಪಾಸ್‌ನಲ್ಲಿ ಭೀಕರ ಅಪಘಾತ ಸಂಭವಿಸಿದೆ.ಪಂಜಾಬ್‌ನಿಂದ ಬೆಂಗಳೂರಿಗೆ ತೆರಳುತ್ತಿದ್ದ ಲಾರಿಯ ಟೈಯರ್ ಏಕಾಏಕಿ ಸ್ಫೋಟಗೊಂಡು ಡಿವೈಡರ್‌ಗೆ ಡಿಕ್ಕಿ ಹೊಡೆದ ಪರಿಣಾಮ ವಾಹನ ಪಲ್ಟಿಯಾಗಿದೆ.

ಬಾಗಲಕೋಟೆ ಜಿಲ್ಲೆಯ ಇಳಕಲ್ ನಗರದ ಬಸವೇಶ್ವರ ವೃತ್ತದ ಬಳಿಯ ಸೊಲ್ಲಾಪುರ–ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಅಂಡರ್‌ಪಾಸ್‌ನಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಲಾರಿಯ ಮುಂಭಾಗ ಸಂಪೂರ್ಣ ಜಖಂಗೊಂಡಿದ್ದು, ಅದೃಷ್ಟವಶಾತ್ ಚಾಲಕ ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಪಂಜಾಬ್‌ನಿಂದ ಬೆಂಗಳೂರಿಗೆ ಸರಕು ಸಾಗಿಸುತ್ತಿದ್ದ ಈ ಲಾರಿಯು ಅಂಡರ್‌ಪಾಸ್‌ನಲ್ಲಿ ಸಾಗುತ್ತಿದ್ದ ವೇಳೆ ಹಠಾತ್ ಟೈಯರ್ ಸ್ಫೋಟಗೊಂಡಿದೆ. ಇದರಿಂದ ನಿಯಂತ್ರಣ ತಪ್ಪಿದ ಲಾರಿ ರಸ್ತೆ ಮಧ್ಯೆ ಇದ್ದ ಡಿವೈಡರ್‌ಗೆ ಜೋರಾಗಿ ಡಿಕ್ಕಿ ಹೊಡೆದ ರಭಸಕ್ಕೆ ತeಲಕಳಗಿ ಪಲ್ಟಿಯಾಗಿದೆ. ಸ್ಥಳಕ್ಕೆ ಇಳಕಲ್ ಪೊಲೀಸ್ ಠಾಣೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ. ಈ ಕುರಿತು ಸ್ಥಳೀಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:

error: Content is protected !!