ಬಳ್ಳಾರಿ ಜಿಲ್ಲೆಯ ಸಿರಗುಪ್ಪ ಪಟ್ಟಣದ ಬೈಪಾಸ್ ರಸ್ತೆಯಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಲಾರಿ ಡಿಕ್ಕಿ ಹೊಡೆದು ಪರಾರಿಯಾಗಿರುವ ಚಾಲಕನಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ.

ಬಳ್ಳಾರಿ ಜಿಲ್ಲೆ ಸಿರಗುಪ್ಪ ಪಟ್ಟಣದ ಬೈಪಾಸ್ ರಸ್ತೆ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರನೊಬ್ಬ ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ವರದಿಯಾಗಿದೆ. ಸಿರಗುಪ್ಪ ತಾಲೂಕಿನ ಚಿಕ್ಕಬಳ್ಳಾರಿ ಗ್ರಾಮದ ನಿವಾಸಿ ವಿರುಪಾಕ್ಷರೆಡ್ಡಿ (55) ಮೃತ ದುರ್ದೈವಿ. ಅವರು ಬೈಕ್ನಲ್ಲಿ ತೆರಳುತ್ತಿದ್ದ ವೇಳೆ ವೇಗವಾಗಿ ಬಂದ ಲಾರಿ ಡಿಕ್ಕಿ ಹೊಡೆದ ಪರಿಣಾಮ, ತೀವ್ರ ರಕ್ತಸ್ರಾವವಾಗಿ ಅವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಅಪಘಾತ ಎಸಗಿದ ಬಳಿಕ ಲಾರಿ ಚಾಲಕ ವಾಹನ ಸಮೇತ ಸ್ಥಳದಿಂದ ಪರಾರಿಯಾಗಿದ್ದಾನೆ. ಮಾಹಿತಿ ತಿಳಿದ ತಕ್ಷಣ ಸ್ಥಳಕ್ಕೆ ಧಾವಿಸಿದ ಸಿರಗುಪ್ಪ ಪೊಲೀಸರು ಪರಿಶೀಲನೆ ನಡೆಸಿದ್ದು, ಈ ಸಂಬಂಧ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
