ಭಾರತ ದೇಶದ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ 76 ನೇ ಜನ್ಮ ದಿನಾಚಾರಣೆ ಅಂಗವಾಗಿ ಹುಕ್ಕೇರಿ ತಾಲೂಕಿನ ಬೆಲ್ಲದ ಬಾಗೆವಾಡಿ ಗ್ರಾಮದಲ್ಲಿ ಶಾಸಕ ನಿಖಿಲ್ ಕತ್ತಿ ಯವರು ತಮ್ಮ ಕುಟುಂಬ ಸದಸ್ಯರೊಂದಿಗೆ ಮೆಣದ ಬತ್ತಿ ಹಚ್ಚಿ ಪ್ರಧಾನಿ ಯವರಿಗೆ ಹುಟ್ಟು ಹಬ್ಬದ ಶುಭಾಶಯ ಹೇಳಿ ಮಾದ್ಯಮಗಳೊಂದಿಗೆ ಮಾತನಾಡುತ್ತಾ ಕಳೆದ ಹತ್ತು ವರ್ಷಗಳ ಮೆಲ್ಪಟ್ಟು ದೇಶದ ಚುಕ್ಕಾಣಿ ಹಿಡಿದ ನರೇಂದ್ರ ಮೋದಿಯವರು ಹತ್ತು ಹಲವಾರು ಜನಪರ ಯೋಜನೆಗಳನ್ನು ಜಾರಿಗೆ ತಂದು ದೇಶದ ಜನತೆಯ ಪ್ರೀತಿಗೆ ಪಾತ್ರರಾಗಿ ಈಗಲೂ ಯುವ ಜನತೆಗೆ ಉದ್ಯೋಗ ಅವಕಾಶ ಕಲ್ಪಿಸುವ ಕಾರ್ಯ ಮಾಡುತ್ತಿರುವ ನೆಚ್ಚಿನ ಪ್ರಧಾನಿಯವರಿಗೆ ಶುಭಾಶಯ ಹೇಳಿದರು.
ಈ ಸಂದರ್ಭದಲ್ಲಿ ಕುಟುಂಬ ಸದಸ್ಯರು, ಭಾರತೀಯ ಜನರಾ ಪಕ್ಷದ ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು.
ರಾಜು ಬಾಗಲಕೋಟಿ
ಇನ್ ನ್ಯೂಜ ಹುಕ್ಕೇರಿ.

