ಹುಕ್ಕೇರಿ ತಾಲೂಕಿನ ಖಾಸಗಿ ಫ್ರೌಡ ಶಾಲೆಯ ವಿದ್ಯಾರ್ಥಿನಿ ಖುಷಿ ಮಹಾವೀರ ಚೌಗಲಾ ಜಿಲ್ಲಾ ಮಟ್ಟದ ಟೆಕ್ಯಾಂಡೊ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ.


ಕುಡಚಿ ಸರಕಾರಿ ಶಾಲೆಯಲ್ಲಿ ಜರುಗಿದ ಚಿಕ್ಕೋಡಿ ಶೈಕ್ಷಣಿಕ ಜಿಲ್ಲಾ ಮಟ್ಟದ ಟೆಕ್ಯಾಂಡೊ ಸ್ಪರ್ಧೆಯಲ್ಲಿ ಹುಕ್ಕೇರಿ ತಾಲೂಕಿನ ಸ್ವಾಮಿ ವಿವೇಕಾನಂದ ಶಾಲೆಯ ವಿದ್ಯಾರ್ಥಿನಿ ಖುಷಿ ಚೌಗಲಾ ಭಾಗವಹಿಸಿ ಉತ್ತಮ ಪ್ರದರ್ಶನ ನೀಡಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿ ಹುಕ್ಕೇರಿ ತಾಲೂಕಿಗೆ ಕಿರ್ತಿ ತಂದಿದ್ದಾಳೆ,
ನಂತರ ನಡೆದ ಸರಳ ಸಮಾರಂಭದಲ್ಲಿ ಖುಷಿ ಪ್ರಥಮ ಬಹುಮಾನ ಮತ್ತು ಪ್ರಮಾಣ ಪತ್ರ ಪಡೆದಳು.
ಇವಳ ಸಾಧನೆಗೆ ರೀಡ್ಸ ಸಂಸ್ಥೆಯ ಅದ್ಯಕ್ಷ ಅಶೋಕ ಪಾಟೀಲ ಸೇರಿದಂತೆ ಶಿಕ್ಷಣ ಇಲಾಖೆ ಅಧಿಕಾರಿಗಳು ಪ್ರಶಂಸೆ ವ್ಯಕ್ತ ಪಡಿಸಿದ್ದಾರೆ.
ಈ ಕುರಿತು ಮಾತನಾಡಿದ ಬೆಳಗಾವಿ ಜಿಲ್ಲಾ ಟೆಕ್ಯಾಂಡೊ ಅಸೋಸಿಯೇಶನ್ ಕಾರ್ಯದರ್ಶಿ ಪ್ರಭಾಕರ ಶೇಡಬಾಳೆ ಜಿಲ್ಲೆಯ ಸರಕಾರಿ ಮತ್ತು ಖಾಸಗಿ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುವ ವಿದ್ಯಾರ್ಥಿಗಳಿಗಾಗಿ ಹಮ್ಮಿಕೊಂಡ ಟೆಕ್ಯಾಂಡೊ ಸ್ಪರ್ಧೆಗಳಲ್ಲಿ ಭಾಗವಹಿಸಿ ವಿಜೇತ ಪಟುಗಳಿಗೆ ರಾಜ್ಯ ಮಟ್ಟದಲ್ಲಿ ಭಾಗವಹಿಸಲು ಅವಕಾಶ ದೊರೆಯುತ್ತದೆ ಜಿಲ್ಲೆಯ ವಿಧ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸ ಬೇಕು ಎಂದರು
ನಂತರ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಯಿತು.
ರಾಜು ಬಾಗಲಕೋಟಿ
ಇನ್ ನ್ಯೂಜ ಹುಕ್ಕೇರಿ
