‘ಇದೇನು ಟೂರಿಂಗ್ ಟಾಕೀಸಾ?’ ಎಂಬ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಟೀಕೆಗೆ ಸಿಎಂ ಡಿ.ಕೆ.ಶಿವಕುಮಾರ್ ಅವರು ಪ್ರತಿಕ್ರಿಯಿಸಿದ್ದಾರೆ. ಅವರು ಮಾಜಿ ಮುಖ್ಯಮಂತ್ರಿಗಳು ತಮ್ಮ ಅನುಭವದಿಂದ ಮಾತನಾಡುತ್ತಿರಬಹುದು. ಅವರ ಅನುಭವ ನನಗೆ ಇಲ್ಲದಿರಬಹುದು. ನಾನು ಮುಖ್ಯಮಂತ್ರಿಯಾಗಿ ಕೇವಲ 100 ದಿನಗಳಾಗಿದ್ದು, ಸಾಮಾನ್ಯ ಕುಟುಂಬದಿಂದ ಬಂದವರು. ಹೀಗಾಗಿ ಅವರ ಟೀಕೆಯನ್ನು ಕ್ರೀಡಾಸ್ಪೂರ್ತಿಯಿಂದ ಸ್ವೀಕರಿಸುವುದಾಗಿ ತಿಳಿಸಿದ್ದಾರೆ.

ಸಕಲೇಶಪುರದಲ್ಲಿ ಭಾನುವಾರ ಸಾರ್ವಜನಿಕರ ಅಭಿಪ್ರಾಯ ಸಂಗ್ರಹಕ್ಕೆ ಬಂದ ವೇಳೆ ಹೆಲಿಪ್ಯಾಡ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಗಳೂರಿನಲ್ಲಿ ನಡೆಸಿದ ಸಚಿವ ಸಂಪುಟ ಸಭೆ ಕುರಿತು ‘ಇದೇನು ಟೂರಿಂಗ್ ಟಾಕೀಸ್?’ ಎಂಬ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಟೀಕೆಗೆ ಪ್ರತಿಕ್ರಿಯಿಸಿದ ಅವರು, ಉತ್ತಮ ಸಲಹೆಗಳು ಬಂದರೆ ಅವುಗಳನ್ನು ಸ್ವೀಕರಿಸಲು ಸರ್ಕಾರ ಸಿದ್ಧವಿದೆ ಎಂದರು.ಕುಮಾರಸ್ವಾಮಿ ಅನುಭವದಿಂದ ಮಾತನಾಡುತ್ತಿರಬಹುದು ರಾಜಕಾರಣದಲ್ಲಿ ಇರುವುದು ಟೀಕೆ ಮಾಡುವುದು ಸಹಜ. ತಾವೂ ಹಿಂದೆ ಟೂರಿಂಗ್ ಟಾಕೀಸ್ ನಡೆಸಿರುವುದಾಗಿ ಹೇಳಿದ್ದಾರೆ. ಮಾಜಿ ಮುಖ್ಯಮಂತ್ರಿಗಳು ತಮ್ಮ ಅನುಭವದಿಂದ ಮಾತನಾಡುತ್ತಿರಬಹುದು. ಅವರ ಅನುಭವ ನನಗೆ ಇಲ್ಲದಿರಬಹುದು. ನಾನು ಮುಖ್ಯಮಂತ್ರಿಯಾಗಿ ಕೇವಲ 100 ದಿನಗಳಾಗಿದ್ದು, ಸಾಮಾನ್ಯ ಕುಟುಂಬದಿಂದ ಬಂದವರು. ಹೀಗಾಗಿ ಅವರ ಟೀಕೆಯನ್ನು ಕ್ರೀಡಾಸ್ಪೂರ್ತಿಯಿಂದ ಸ್ವೀಕರಿಸುವುದಾಗಿ ಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.
ಇನ್ನು ಕಸ್ತೂರಿರಂಗನ್ ವರದಿ ಕುರಿತು ರಾಜ್ಯದ ಅಭಿಪ್ರಾಯವನ್ನು ಸೆ.27ರೊಳಗೆ ಕೇಂದ್ರ ಸರ್ಕಾರಕ್ಕೆ ತಿಳಿಸಬೇಕಿದ್ದು, ಜನರು, ರೈತರು ಹಾಗೂ ಅರಣ್ಯ ಪ್ರದೇಶದ ಸುತ್ತ ವಾಸಿಸುವವರ ಅಭಿಪ್ರಾಯವನ್ನು ಪಡೆದು ವಿಧಾನಸಭೆಯಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು. ಉಡುಪಿ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಈಗಾಗಲೇ ಜನರೊಂದಿಗೆ ಚರ್ಚೆ ನಡೆಸಿದ್ದು, ಇಡೀಗ ಹಾಸನ ಜಿಲ್ಲೆಯ ಸಕಲೇಶಪುರ ಭಾಗಕ್ಕೆ ಭೇಟಿ ನೀಡಿದ್ದೇನೆ. ಜನರ ಭಾವನೆ, ರೈತರ ಅಭಿಪ್ರಾಯ ಹಾಗೂ ಅರಣ್ಯ ಪ್ರದೇಶದ ನಿವಾಸಿಗಳ ಸಮಸ್ಯೆಗಳನ್ನು ನೇರವಾಗಿ ಆಲಿಸಿ, ಅವುಗಳನ್ನು ವಿಧಾನಸಭೆ ಹಾಗೂ ವಿಧಾನ ಪರಿಷತ್ತಿನ ಸದಸ್ಯರ ಗಮನಕ್ಕೆ ತರಲಾಗುವುದು ಎಂದರು.ಜನರು, ರೈತರು ಹಾಗೂ ಹೋರಾಟಗಾರರು ಹಲವು ಸಲಹೆಗಳನ್ನು ನೀಡಿದ್ದಾರೆ. ಅವುಗಳನ್ನು ಪರಿಗಣಿಸಿ ಮುಂದಿನ ಕ್ರಮದ ಕುರಿತು ವಿಶೇಷ ಅಧಿವೇಶನದಲ್ಲಿ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದರು.
ವಿಶೇಷ ಅಧಿವೇಶನದಲ್ಲಿ ಬರಗಾಲ ಹಾಗೂ ರೈತರ ಸಮಸ್ಯೆಗಳ ಕುರಿತು ಪ್ರಮುಖವಾಗಿ ಚರ್ಚೆ ನಡೆಯಲಿದೆ. ಪ್ರಶ್ನೋತ್ತರ, ಕಾಲಿಂಗ್ ಅಟೆನ್ಷನ್ ಸೇರಿದಂತೆ ಇತರ ಸಾಮಾನ್ಯ ಕಲಾಪಗಳಿಗೆ ಅವಕಾಶ ಇರುವುದಿಲ್ಲ. ರೈತರು ಹಾಗೂ ಜನರಿಗೆ ಸಂಬಂಧಿಸಿದ ವಿಷಯಗಳ ಕುರಿತು ಚರ್ಚೆ ನಡೆಸಲು ಸಂಪೂರ್ಣ ಸಮಯ ಮೀಸಲಿಡಲಾಗಿದೆ ಎಂದು ಮುಖ್ಯಮಂತ್ರಿ ತಿಳಿಸಿದರು. ಅವರಿಗೆ ರಾಜಕಾರಣ ಮುಖ್ಯವಾಗಿರಬಹುದು. ನಮಗೆ ಜನರ ಬದುಕು ಮುಖ್ಯ ಎಂದ ಶಿವಕುಮಾರ್, ಸರ್ಕಾರ ಜನರ ಭಾವನೆ, ಆಶಯ ಹಾಗೂ ಸಮಸ್ಯೆಗಳನ್ನು ಗಮನದಲ್ಲಿ ಇಟ್ಟುಕೊಂಡು ಆಡಳಿತ ನಡೆಸುತ್ತಿದೆ ಎಂದರು. ಬೈಟ್
ಇದಕ್ಕೂ ಮುನ್ನ ಹಾಸನ ಜಿಲ್ಲೆಯ ಸಕಲೇಶಪುರಕ್ಕೆ ಆಗಮಿಸಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಭವ್ಯ ಗೌರವ ರಕ್ಷೆ ಸ್ವೀಕರಿಸಲಾಯಿತು. ನಂತರ ಸಕಲೇಶಪುರದ ಕೆಂಪೇಗೌಡ ವೃತ್ತದಲ್ಲಿರುವ ನಾಡಪ್ರಭು ಕೆಂಪೇಗೌಡರ ಪ್ರತಿಮೆಗೆ ಪುಷ್ಪನಮನ ಸಲ್ಲಿಸಿ ಗೌರವ ಸಮರ್ಪಿಸಿದರು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಲತಾ ಕುಮಾರಿ, ಸಚಿವರಾದ ಶಿವಲಿಂಗೆಗೌಡ, ಸಂಸದರಾದ ಶ್ರೇಯಸ್ ಪಟೇಲ್ ಹಾಗೂ ಕಾಂಗ್ರೆಸ್ ಮುಖಂಡ ಮುರಳಿ ಮೋಹನ್ ಉಪಸ್ಥಿತರಿದ್ದು ಸಾಥ್ ನೀಡಿದರು.
