ಖಾನಾಪುರ ತಾಲೂಕಿನಲ್ಲಿ ಶಿಕ್ಷಕರ ದಿನಾಚರಣೆ ಅಂಗವಾಗಿ ಖಾನಾಪುರ ಪಟ್ಟಣ ಹಾಗೂ ನಂದಗಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ರಕ್ತದಾನ ಶಿಬಿರ ಆಯೋಜಿಸಲಾಗಿದೆ. ಶಾಸಕರ ಉಪಸ್ಥಿತಿಯಲ್ಲಿ ಜರುಗಿದ ಈ ಶಿಬಿರದಲ್ಲಿ ನೌಕರರು ಹಾಗೂ ಸಾರ್ವಜನಿಕರು ಉತ್ಸಾಹದಿಂದ ಪಾಲ್ಗೊಂಡು ರಕ್ತದಾನ ಮಾಡಿದರು.


ಶಿಕ್ಷಕರ ದಿನಾಚರಣೆ ಪ್ರಯುಕ್ತವಾಗಿ ಖಾನಾಪುರ ಪಟ್ಟಣದ ಪಟ್ಟಣ ಪಂಚಾಯತಿಯ ಮಂಗಲ ಕಾರ್ಯಾಲಯ ಹಾಗೂ ನಂದಗಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಬೃಹತ್ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿದ್ದು, ಶಾಸಕ ವಿಠ್ಠಲ ಹಲಗೇಕರ ಅವರು ಉದ್ಘಾಟಿಸಿ ರಕ್ತದಾನಿಗಳಿಗೆ ಪ್ರೋತ್ಸಾಹಿಸಿದರು. ಈ ಕುರಿತು ತಾಲೂಕಾ ಆರೋಗ್ಯಾಧಿಕಾರಿ ಡಾ. ಮಹೇಶ್ ಕಿವಡಸನ್ನವರ ಮಾತನಾಡಿ, ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳಲ್ಲಿ ರಕ್ತದಾನದ ಮಹತ್ವ ತಿಳಿಸಿ ಜಾಗೃತಿ ಮೂಡಿಸುವ ಉದ್ದೇಶದಿಂದ ಈ ಶಿಬಿರ ಹಮ್ಮಿಕೊಳ್ಳಲಾಗಿದೆ ಎಂದರು.

ಬೆಳಗಾವಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ ಅವರ ಮಾರ್ಗದರ್ಶನ ಹಾಗೂ ಪ್ರೇರಣೆಯಿಂದ ಜಿಲ್ಲೆಯಲ್ಲಿ ಸಾವಿರಾರು ದಾನಿಗಳು ನೋಂದಣಿ ಮಾಡಿಕೊಂಡಿದ್ದು, ನ್ಯಾಷನಲ್ ಬುಕ್ ಆಫ್ ರೆಕಾರ್ಡ್ಸ್ ದಾಖಲೆಯನ್ನು ಮುರಿಯುವ ವಿಶ್ವಾಸವಿದೆ ಎಂದು ಅವರು ತಿಳಿಸಿದರು. ರಕ್ತ ಸಿಗದೆ ಪ್ರಾಣ ಕಳೆದುಕೊಳ್ಳುವ ಪರಿಸ್ಥಿತಿ ಬಾರದಂತೆ ತಡೆಯಲು ರಕ್ತದಾನ ನಿರಂತರವಾಗಿ ಸಾಗಬೇಕು ಎಂದು ಅವರು ಆಶಿಸಿದರು.
