ಬೆಳಗಾವಿ ಜಿಲ್ಲೆಯಲ್ಲಿ ಮಹಿಳಾ ಕಾಂಗ್ರೆಸ್ ಸಂಘಟನೆಯನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅವರನ್ನು ಭೇಟಿಯಾಗಿ ಪ್ರಮುಖ ಚಟುವಟಿಕೆಗಳ ಕುರಿತು ಚರ್ಚಿಸಲಾಯಿತು.

ಬೆಳಗಾವಿ ಜಿಲ್ಲಾ ಮಹಿಳಾ ಗ್ರಾಮೀಣ ಘಟಕದ ಅಧ್ಯಕ್ಷೆ ಅಶ್ವಿನಿ ಬೆಳವಡಿ ಅವರು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅವರನ್ನು ಭೇಟಿಯಾಗಿ ಮಾರ್ಗದರ್ಶನ ಪಡೆದರು. ಬಳಿಕ, ನೂತನ ಬುಡಾ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಶಾಸಕ ಆಸೀಫ್ ಸೇಠ್ ಅವರನ್ನು ಭೇಟಿಯಾಗಿ ಆತ್ಮೀಯವಾಗಿ ಸತ್ಕರಿಸುವುದರೊಂದಿಗೆ, ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರದ ವ್ಯಾಪ್ತಿಯ ಅಭಿವೃದ್ಧಿಪರ ಯೋಜನೆಗಳ ಕುರಿತು ಸಮಾಲೋಚನೆ ನಡೆಸಿದರು. ಈ ಸಂದರ್ಭದಲ್ಲಿ ಕಿತ್ತೂರು ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಡೀನಾ, ಸವದತ್ತಿ ಅಧ್ಯಕ್ಷೆ ವನಜಾಕ್ಷಿ ಹಾಗೂ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಸಿದ್ದಪ್ಪ ಗೋರವನಕೊಳ್ಳ ಉಪಸ್ಥಿತರಿದ್ದರು.
