KPSC ಅಕ್ರಮವನ್ನು ಸಿಬಿಐ ತನಿಖೆಗೆ ವಹಿಸುವಂತೆ ಆಗ್ರಹಿಸಿ ಕಳೆದ ಐದು ದಿನಗಳಿಂದ ಧಾರವಾಡದಲ್ಲಿ ವಿದ್ಯಾರ್ಥಿಗಳ ಒಕ್ಕೂಟ ನಡೆಸುತ್ತಿರುವ ಹೋರಾಟಕ್ಕೆ, ಕೆಆರ್ಎಸ್ಪಕ್ಷದ ಮುಖಂಡ ಕೃಷ್ಣಾ ರೆಡ್ಡಿ ನೇತೃತ್ವದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿ ಬೆಂಬಲ ಸೂಚಿಸಲಾಯಿತು.

ನಗರದ ಡಿಸಿ ಕಚೇರಿ ಮುಂಭಾಗದಲ್ಲಿ ವಿದ್ಯಾರ್ಥಿಗಳ ಒಕ್ಕೂಟ ಅನಿರ್ದಿಷ್ಟಾವಧಿ ಪ್ರತಿಭಟನಾ ಧರಣಿ ಕೈಗೊಂಡಿದ್ದು, ಈ ಹೋರಾಟಕ್ಕೆ ಕೆಆರ್ಎಸ್ ಒಕ್ಷದ ಮುಖಂಡ ಕೃಷ್ಣಾ ರೆಡ್ಡಿಯವರ ನೇತೃತ್ವದಲ್ಲಿ ಪ್ರತಿಭಟನಾ ಮೆರವಣಿಗೆ ಮೂಲಕ ಆಗಮಿಸಿ ಬೆಂಬಲ ನೀಡಿ ಮೂರು ರಾಜಕೀಯ ಪಕ್ಷಗಳ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಕೆಪಿಎಸ್ಸಿ ಹೋರಾಟಕ್ಕೆ ಸಂಘ ಸಂಸ್ಥೆಗಳ ಬೆಂಬಲ ಒಕ್ಕೂಟ ಬೆಂಬಲಕೋರಿದರು. ಈ ಹಿನ್ನಲೆಯಲ್ಲಿ ಇಂದು ಕೆಅರ್ಎಸ್ ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರು ಪ್ರತಿಭಟನೆ ನಡೆಸಿ ವಿದ್ಯಾರ್ಥಿಗಳ ಒಕ್ಕೂಟಕ್ಕೆ ಬೆಂಬಲ ನೀಡಿ, ನಿಮ್ಮ ಹೋರಾಟಕ್ಕೆ ನಾವು ಜತೆಗೆದ್ದೇವೆ ಎಂದು ತಿಳಿಸಿದರು. ಕೆಪಿಎಸ್ಸಿ ಪಶು ವೈದ್ಯಕೀಯ ನೇಮಕಾತಿಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ನಡೆದಿರುವುದು ಸತ್ಯ, ಈ ಪ್ರಕರಣವನ್ನು ರಾಜ್ಯ ಸರ್ಕಾರ ಸ್ಥಳೀಯವಾಗಿ ನಡೆಸುತ್ತಿರುವದು ಹಲವು ಅನುಮಾನಗಳನ್ನು ಹುಟ್ಟುಹಾಕಿದೆ. ಇದರಲ್ಲಿ ರಾಜಕೀಯ ನಾಯಕರ ಪಾತ್ರವು ಕೂಡಾ ಇದೆ, ಈ ಆಕ್ರಮದ ತನಿಖೆ ನಿಷ್ಪಕ್ಷಪಾತವಾಗಿ ನಡೆಯಬೇಕು. ವಿದ್ಯಾರ್ಥಿಗಳ ಒಕ್ಕೂ ಸಿಬಿಐಗೆ ಈ ಅಕ್ರಮ ತನಿಖೆಯನ್ನು ನೀಡಲು ಒತ್ತಾಯ ಮಾಡುತ್ತಿರುವುದು ನ್ಯಾಯಯುತವಾದ ಆಗ್ರಹವಾಗಿದೆ.ಈ ಕೂಡಲೇ ರಾಜ್ಯ ಸರ್ಕಾರ ವಿದ್ಯಾರ್ಥಿಗಳ ಒಕ್ಕೂಟದ ಬೇಡಿಕೆಗೆ ಸ್ಪಂದಿಸಿ ಪ್ರಕರಣದ ತನಿಖೆಯನ್ನು ಸಿಬಿಐಗೆ ನೀಡಬೇಕು ಎಂದು ಆಗ್ರಹಿಸಿದರು.
