ಖಾನಾಪೂರ ತಾಲೂಕಿನ ಮಾಣಿಕವಾಡಿ ಕ್ರಾಸ್ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟು, ಗಾಯಗೊಂಡಿದ್ದ ಪತ್ನಿ ಕೂಡ ಆಸ್ಪತ್ರೆಯಲ್ಲಿ ಸಾವನ್ನಪ್ಪಿರುವ ಘಟನೆ ನಡೆದಿದೆ.


ಖಾನಾಪೂರ–ಲೋಂಡಾ ಮಾರ್ಗದ ಮಾಣಿಕವಾಡಿ ಕ್ರಾಸ್ ಬಳಿ ಮಂಗಳವಾರ ರಾತ್ರಿ ಸಂಭವಿಸಿದ ಭೀಕರ ಬೈಕ್ ಮತ್ತು ಟ್ರಕ್ ಮುಖಾಮುಖಿ ಡಿಕ್ಕಿಯಲ್ಲಿ ಯುವರಾಜ ಶತ್ರುಘ್ನ ಮಳಿಕ (30) ಸ್ಥಳದಲ್ಲೇ ಮೃತಪಟ್ಟಿದ್ದು, ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಅವರ ಪತ್ನಿ ಮೋಹಿನಿ ಯುವರಾಜ ಮಳಿಕ (25) ಕೂಡ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಖಾನಾಪೂರದಿಂದ ಜಟಗೆ ಗ್ರಾಮಕ್ಕೆ ಬೈಕ್‌ನಲ್ಲಿ ತೆರಳುತ್ತಿದ್ದ ದಂಪತಿ ಮೇಲೆ ಈ ದುರಂತ ಸಂಭವಿಸಿದ್ದು, ಘಟನಾ ಸ್ಥಳಕ್ಕೆ ಖಾನಾಪೂರ ಪೊಲೀಸರು ಭೇಟಿ ನೀಡಿ ಮರಣೋತ್ತರ ಪರೀಕ್ಷೆಗಾಗಿ ಮೃತದೇಹಗಳನ್ನು ಆಸ್ಪತ್ರೆಗೆ ರವಾನಿಸಿದ್ದು, ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
