PF ಸಮಸ್ಯೆಯನ್ನು ಬಗೆಹರಿಸುವಂತೆ ಆಗ್ರಹಿಸಿ ಇಂದು ಹುಬ್ಬಳ್ಳಿಯ ತಾರಿಹಾಳ ಬೈಪಾಸ್ ಗೇಟ್ ಬಳಿ ಗಾರ್ಮೆಂಟ್ಸ್ ಕಾರ್ಮಿಕ ಮಹಿಳೆಯರು ಬೃಹತ್ ಪ್ರತಿಭಟನೆ ನಡೆಸಿದರು.
ಸುಮಾರು ನೂರಾರು ಮಹಿಳೆಯರು ರಸ್ತೆ ತಡೆದು ಪ್ರತಿಭಟನೆ ನಡೆಸಿದ ಪರಿಣಾಮ ಕೆಲಕಾಲ ಸಂಚಾರ ಅಸ್ತವ್ಯಸ್ತಗೊಂಡಿತು. ವಿಷಯ ತಿಳಿಯುತ್ತಿದ್ದಂತೆ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿಯನ್ನು ತಿಳಿಗೊಳಿಸುವಲ್ಲಿ ಯಶಸ್ವಿಯಾದರು. ತಮ್ಮ PF ಸಮಸ್ಯೆಯನ್ನು ತಕ್ಷಣ ಬಗೆಹರಿಸಬೇಕು ಎಂದು ಮಹಿಳೆಯರು ಪಟ್ಟು ಹಿಡಿದು ಆಗ್ರಹಿಸಿದರು.

