Belagavi

ಬೆಳಗಾವಿಯಲ್ಲಿ ಗಣೇಶ ವಿಸರ್ಜನೆಗೆ ಭರ್ಜರಿ ಸಿದ್ಧತೆ: ಹೊಂಡ ಹಾಗೂ ಮೆರವಣಿಗೆ ಮಾರ್ಗಗಳನ್ನು ಪರಿಶೀಲಿಸಿದ ಮೇಯರ್ ಮತ್ತು ಆಯುಕ್ತರು

Share

 

ಬೆಳಗಾವಿ : ಗಣೇಶ ಮೂರ್ತಿಗಳ ವಿಸರ್ಜನೆಯ ಹಿನ್ನೆಲೆಯಲ್ಲಿ ಹೊಂಡಗಳು ಹಾಗೂ ಮೆರವಣಿಗೆ ಮಾರ್ಗಗಳಲ್ಲಿ ಮಹಾನಗರ ಪಾಲಿಕೆ ಹಾಗೂ ವಿವಿಧ ಇಲಾಖೆಗಳಿಂದ ನಡೆದಿರುವ ಕೊನೆಯ ಹಂತದ ಸಿದ್ಧತೆಗಳನ್ನು ಮೇಯರ್ ಪ್ರೀತಿ ಕಾಮಕರ್, ಉಪಮೇಯರ ಹಣಮಂತ ಕೊಂಗಾಲಿ ಹಾಗೂ ಪಾಲಿಕೆ ಆಯುಕ್ತ ಕಾರ್ತಿಕ್ ಎಂ. ಅವರು ಅಧಿಕಾರಿಗಳ ತಂಡದೊಂದಿಗೆ ಭೇಟಿ ನೀಡಿ ಪರಿಶೀಲಿಸಿದರು.

ಕಪಿಲೇಶ್ವರ ದೇವಸ್ಥಾನದ ಆವರಣದಲ್ಲಿರುವ ಹಳೆಯ ಮತ್ತು ಹೊಸ ಹೊಂಡ, ಜಕ್ಕೇರಿ ಹೊಂಡ, ಕಿಲ್ಲಾ ಕೆರೆ
ಸೇರಿದಂತೆ ಪಾಲಿಕೆ ವ್ಯಾಪ್ತಿಯಲ್ಲಿ ವಿವಿದೆಡೆ ಹೊಂಡಗಳಿರುವ ಸ್ಥಳಗಳಿಗೆ ಭೇಟಿ ನೀಡಿ ಸ್ವಚ್ಛತೆ ಸೌಲಭ್ಯಗಳು ಮತ್ತು ಸುರಕ್ಷತಾ ಕ್ರಮಗಳನ್ನು ಪರಿಶೀಲಿಸಿದರು.
ಮೆರವಣಿಗೆ ಸಾಗುವ ಮಾರ್ಗಗಳಿಗೂ ಸಹ ಭೇಟಿ ನೀಡಿ ರಸ್ತೆ ದುರಸ್ತಿ ಕಾರ್ಯವನ್ನು ಪರಿಶೀಲಿಸಿದರು.
ಪರಿಶೀಲನೆಯ ನಂತರ ಮೇಯರ್ ಪ್ರೀತಿ ಕಾಮಕರ್ ಅವರು, ಕಳೆದ ಕೆಲವು ದಿನಗಳಿಂದ ಕಾಮಗಾರಿಗಳು ನಡೆದಿದ್ದು , ಕೊನೆಯ ಹಂತದ ಸಿದ್ಧತೆಗಳನ್ನು ಶೀಘ್ರ ಮುಗಿಸಿ ಸಾರ್ವಜನಿಕರಿಗೆ ಯಾವುದೇ ತೊಂದರೆಗಳಾಗದಂತೆ ವಿಸರ್ಜನಾ ಕಾರ್ಯ ನಡೆಯಲು ಅನುಕೂಲ ಮಾಡಿಕೊಡಬೇಕೆಂದು ಸ್ಥಳದಲ್ಲಿದ್ದ ಪಾಲಿಕೆ ಹಾಗೂ ಎಲ್ ಅಂಡ್ ಟಿ ಸೇರಿದಂತೆ ಇನ್ನಿತರ ಇಲಾಖೆಗಳ ಅಧಿಕಾರಿಗಳಿಗೆ ಸೂಚಿಸಿದರು.
ಉಪಮೇಯರ ಹಣಮಂತ ಕೊಂಗಾಲಿಯವರು, ಈಗಾಗಲೇ ಹಲವು ಬಾರಿ ಸಭೆಗಳನ್ನು ನಡೆಸಿ ವಿವಿಧ ಜವಾಬ್ದಾರಿಗಳನ್ನು ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಯಾವುದೇ ಕಾರ್ಯಗಳು ಉಳಿದಿದ್ದರೆ,
ಗಮನಿಸಿ ಸಾಕಷ್ಟು ಮುಂಚಿತವಾಗಿ ಸಿದ್ಧತೆಗಳನ್ನು ಮಾಡಿಕೊಡಬೇಕೆಂದು ಅಧಿಕಾರಿಗಳಿಗೆ ತಾಕೀತು ಮಾಡಿದರು.


ಪಾಲಿಕೆ ಆಯುಕ್ತ ಕಾರ್ತಿಕ್ ಎಂ.ಅವರು,ಹೊಂಡಗಳಿರುವ ಆವರಣದಲ್ಲಿ ಕ್ರೇನ್, ಮಂಟಪ, ಧ್ವನಿವರ್ಧಕ ಕುಡಿಯುವ ನೀರು ಸೇರಿದಂತೆ ವಿವಿಧ ಸಿದ್ಧತೆ ಮಾಡಿಕೊಂಡು, ಪೊಲೀಸ್ , ಜೀವ ರಕ್ಷಕ ತಂಡ ಸೇರಿದಂತೆ ವಿವಿಧ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸಬೇಕೆಂದು ಸೂಚಿಸಿದರು.
ಗಣೇಶ ಉತ್ಸವ ಮಂಡಳಿ ಪದಾಧಿಕಾರಿಗಳು ಹಾಗೂ ಶುಕ್ರವಾರ ಜರುಗುವ ಗಣೇಶ ವಿಸರ್ಜನಾ ಮೆರವಣಿಗೆ ವೀಕ್ಷಣೆಗೆ ಆಗಮಿಸುವ
ಸಾರ್ವಜನಿಕರು ಪೊಲೀಸ್ ಹಾಗೂ ಇತರ ಇಲಾಖೆಗಳ ಸಿಬ್ಬಂದಿಯೊಂದಿಗೆ ಶಾಂತಿ ಸಮಾಧಾನ ಹಾಗೂ ಶಿಸ್ತಿನಿಂದ ಸಹಕರಿಸಿ ಮೆರವಣಿಗೆಯನ್ನು ಯಶಸ್ವಿಗೊಳಿಸಬೇಕೆಂದು ಮೇಯರ್, ಉಪಮೇಯರ್ ಹಾಗೂ ಆಯುಕ್ತರು ಮನವಿ ಮಾಡಿದ್ದಾರೆ.
ಸ್ಥಾಯಿ ಸಮಿತಿ ಅಧ್ಯಕ್ಷ ರಾಜು ಭಾತಕಂಡೆ, ನಿತಿನ್ ಜಾಧವ ಹಾಗೂ ಇತರೆ ನಗರಸೇವಕರು, ಮಹಾನಗರ ಪಾಲಿಕೆ ಅಭಿಯಂತರರು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು

Tags:

error: Content is protected !!