hubbali

ಎಟಿಎಂ ದೋಚಿದ ಕಿರಾತಕರು :14 ಲಕ್ಷಕ್ಕೂ ಅಧಿಕ ಹಣ ಕಳವು

Share

ಹುಬ್ಬಳ್ಳಿ ತಾಲೂಕಿನ ಬ್ಯಾಹಟ್ಟಿ ಗ್ರಾಮದಲ್ಲಿ ಗುರುವಾರ ಬೆಳಗಿನ ಜಾವ ಎಟಿಎಂ ಶೆಟರ್‌ನ ಲಾಕ್ ಮುರಿದು 3 ಲಕ್ಷಕ್ಕೂ ಅಧಿಕ ರೂಪಾಯಿ ನಗದು ದೋಚಿಕೊಂಡು ಕಳ್ಳರು ಪರಾರಿಯಾಗಿದ್ದಾರೆ.

ಬೆಳಗಿನ ಜಾವ ಸುಮಾರು 3 ಗಂಟೆಗೆ ಎಟಿಎಂಗೆ ನುಗ್ಗಿದ ಕಳ್ಳರು, ಹಣ ದೋಚಿದ ಬಳಿಕ ಮುಂಭಾಗ ಹಾಗೂ ಒಳಭಾಗದಲ್ಲಿದ್ದ ಬಹುತೇಕ ಸಿಸಿಟಿವಿ ಕ್ಯಾಮೆರಾಗಳನ್ನು ಒಡೆದು ಹಾಕಿದ್ದಾರೆ.

ಇದೇ ವೇಳೆ ತಾಲೂಕಿನ ಸುಳ್ಳ ಗ್ರಾಮದಲ್ಲೂ ಎಟಿಎಂ ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿದೆ. ಅಚ್ಚರಿ ಎಂದರೆ, ಸುಳ್ಳ ಗ್ರಾಮದ ಎಟಿಎಂ ನಡು ಊರಿನಲ್ಲೇ ಇದ್ದರೂ ಕಳ್ಳರು ಕೃತ್ಯ ಎಸಗಿದ್ದಾರೆ. ಎಟಿಎಂ ಅನ್ನು ಪೂರ್ಣವಾಗಿ ಟಾರ್ಗೆಟ್ ಮಾಡಿಯೇ ಕಳ್ಳತನ ನಡೆಸಿರುವ ಶಂಕೆ ವ್ಯಕ್ತವಾಗಿದೆ.

ಘಟನಾ ಸ್ಥಳಗಳಿಗೆ ಡಿಎಸ್ಪಿ ವಿನೋದ ಮುಕ್ತೆದಾರ, ಇನ್ಸ್‌ಪೆಕ್ಟರ್ ಮುರಗೇಶ ಚೆನ್ನಣ್ಣನವರ ಹಾಗೂ ಬೆರಳಚ್ಚು ತಜ್ಞರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಎರಡೂ ಪ್ರಕರಣಗಳ ಕುರಿತು ಪೊಲೀಸರು ತನಿಖೆ ಕೈಗೊಂಡಿದ್ದು, ಆರೋಪಿಗಳ ಪತ್ತೆಗೆ ಕ್ರಮ ಮುಂದುವರಿಸಿದ್ದಾರೆ.

Tags:

error: Content is protected !!