Politics

ದೆಹಲಿಯಲ್ಲಿ ಕಾಂಗ್ರೆಸ್ ಕಾರ್ಯಕಾರಿಣಿ ಮಹತ್ವದ ಸಭೆ: ಚುನಾವಣಾ ಆಯೋಗದ ವಿರುದ್ಧ ಸಮರಕ್ಕೆ ಸಿದ್ಧತೆ!

Share

, ದೆಹಲಿಯ ಇಂದಿರಾ ಭವನದಲ್ಲಿಂದು ನಡೆದ ಕಾಂಗ್ರೆಸ್ ಕಾರ್ಯಕಾರಿಣಿ ಸಭೆಯು ರಾಜಕೀಯ ವಲಯದಲ್ಲಿ ಭಾರೀ ಸಂಚಲನ ಮೂಡಿಸಿದೆ. ಮುಖ್ಯ ಚುನಾವಣಾ ಆಯೋಗದ ವಿರುದ್ಧ ಆಕ್ರಮಣಕಾರಿ ಧೋರಣೆ ತಾಳಿರುವ ಹೈಕಮಾಂಡ್, ಮುಂಬರುವ ದಿನಗಳಲ್ಲಿ ದೇಶವ್ಯಾಪಿ ಉಗ್ರ ಹೋರಾಟ ನಡೆಸಲು ರಣತಂತ್ರ ರೂಪಿಸಿದೆ.
ದೆಹಲಿಯ ಪ್ರತಿಷ್ಠಿತ ಇಂದಿರಾ ಭವನದಲ್ಲಿಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕಾರಿಣಿ (CWC) ಸಮಿತಿಯ ಮಹತ್ವದ ಸಭೆ ಯಶಸ್ವಿಯಾಗಿ ಜರುಗಿತು. ಈ ಉನ್ನತ ಮಟ್ಟದ ಸಭೆಯಲ್ಲಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಾದ್ರಾ , ಸಿಎಂ ಡಿ.ಕೆ.ಶಿವಕುಮಾರ್ ಸೇರಿದಂತೆ ಹಲವು ಹಿರಿಯ ಮುಖಂಡರು ಮತ್ತು ರಾಜ್ಯಗಳ ಮುಖ್ಯಮಂತ್ರಿಗಳು ಭಾಗವಹಿಸಿದ್ದರು. ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತ್ತು ಮುಖ್ಯ ಚುನಾವಣಾ ಆಯೋಗದ (CEC) ಕಾರ್ಯವೈಖರಿಯ ಬಗ್ಗೆ ಸಭೆಯಲ್ಲಿ ಗಂಭೀರ ಚರ್ಚೆ ನಡೆಸಲಾಗುತ್ತಿದೆ ಎನ್ನಲಾಗಿದೆ.

ಚುನಾವಣಾ ಆಯೋಗದ ವಿವಾದಾತ್ಮಕ ಧೋರಣೆ ಹಾಗೂ ಮುಖ್ಯ ಚುನಾವಣಾ ಆಯೋಗದ ಮುಖ್ಯಸ್ಥರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್ ನಾಯಕರು, ಸಂವಿಧಾನ ಮತ್ತು ಪ್ರಜಾಪ್ರಭುತ್ವದ ರಕ್ಷಣೆಗಾಗಿ ದೇಶಾದ್ಯಂತ ಬೃಹತ್ ಜನಪರ ಆಂದೋಲನ ಹಮ್ಮಿಕೊಳ್ಳಲು ನಿರ್ಧರಿಸಿದ್ದಾರೆ. ಮುಖ್ಯ ಚುನಾವಣಾ ಆಯೋಗದ ಮುಖ್ಯಸ್ಥರ ರಾಜೀನಾಮೆಗೆ ಆಗ್ರಹಿಸಿ ಉಗ್ರ ಹೋರಾಟ ನಡೆಸಲು ಮುಖಂಡರು ಮುಂಬರುವ ದಿನಗಳ ಕಾರ್ಯತಂತ್ರದ ರೂಪುರೇಷೆಗಳನ್ನು ಅಂತಿಮಗೊಳಿಸಲಿದ್ದಾರೆ ಎನ್ನಲಾಗಿದೆ

Tags:

error: Content is protected !!