Belagavi

2 ಸಾವಿರ ಕೋಟಿ ರೂ ನಮ್ಮ ಟರ್ನ ಓವರ್ ಇದೆ

Share

ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ನಾಯಕರು ಮತ್ತೊಮ್ಮೆ ತೀವ್ರ ವಾಗ್ದಾಳಿ ನಡೆಸಿದ್ದು, ಇ.ಡಿ. ದಾಳಿಗಳು ಸಂಪೂರ್ಣ ರಾಜಕೀಯ ಪ್ರೇರಿತ ಎಂದು ಸಚಿವ ಸತೀಶ್ ಜಾರಕಿಹೊಳಿ ಗಂಭೀರ ಆರೋಪ ಮಾಡಿದ್ದಾರೆ. ಬಿಜೆಪಿಯವರ ಮೇಲೆ ದಾಳಿಯಾಗದೆ ಕೇವಲ ಕಾಂಗ್ರೆಸ್ಸಿಗರನ್ನಷ್ಟೇ ಗುರಿಯಾಗಿಸಲಾಗುತ್ತಿದೆ ಎಂದಿರುವ ಅವರು, ಕಾನೂನು ಹೋರಾಟದ ಮೂಲಕವೇ ಇದಕ್ಕೆ ಸೂಕ್ತ ಉತ್ತರ ನೀಡುವುದಾಗಿ ತಿಳಿಸಿದ್ದಾರೆ.

ಕೇಂದ್ರ ಸರ್ಕಾರದ ತನಿಖಾ ಸಂಸ್ಥೆಗಳ ದುರುಪಯೋಗದ ವಿರುದ್ಧ ತೀವ್ರವಾಗಿ ವಾಗ್ದಾಳಿ ನಡೆಸಿರುವ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ಜಾರಿ ನಿರ್ದೇಶನಾಲಯದ (ಇ.ಡಿ.) ಕ್ರಮಗಳು ಸಂಪೂರ್ಣವಾಗಿ ರಾಜಕೀಯ ಪ್ರೇರಿತವಾಗಿವೆ ಎಂದು ಆರೋಪಿಸಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೇವಲ ವಿರೋಧ ಪಕ್ಷದ ನಾಯಕರನ್ನಷ್ಟೇ ಟಾರ್ಗೆಟ್ ಮಾಡಲಾಗುತ್ತಿದ್ದು, ಬಿಜೆಪಿಯವರ ಮೇಲೆ ಮಾತ್ರ ಯಾಕೆ ದಾಳಿಗಳಾಗುವುದಿಲ್ಲ ಎಂದು ಪ್ರಶ್ನಿಸಿದ್ದಾರೆ. ಕಾನೂನು ಹೋರಾಟದ ಮೂಲಕ ಈ ಆರೋಪಗಳಿಂದ ಕ್ಲೀನ್ ಆಗಿ ಹೊರಬರುವುದೇ ನಮ್ಮ ಮುಂದಿರುವ ಏಕೈಕ ಮಾರ್ಗವಾಗಿದ್ದು, ಇದರ ವಿರುದ್ಧ ರಾಜಕೀಯ ಹಾಗೂ ಕಾನೂನಾತ್ಮಕವಾಗಿ ಒಗ್ಗಟ್ಟಿನ ಹೋರಾಟ ಮುಂದುವರಿಯಲಿದೆ ಎಂದರು.

ಮುಂದುವರಿದು ಮಾತನಾಡಿದ ಅವರು, ಇಂತಹ ರಾಜಕೀಯ ಪ್ರೇರಿತ ದಾಳಿಗಳ ಮುನ್ಸೂಚನೆಯನ್ನು ಸಿಎಂ ಹಾಗೂ ಡಿ.ಕೆ. ಶಿವಕುಮಾರ್ ಅವರು ಮೊದಲೇ ನೀಡಿದ್ದರು ಎಂಬುದನ್ನು ಸ್ಮರಿಸಿದರು. ಕಳೆದ ಹತ್ತು ವರ್ಷಗಳಲ್ಲಿ ದೇಶಾದ್ಯಂತ ವಿಪಕ್ಷಗಳ ನಾಯಕರನ್ನು ವ್ಯವಸ್ಥಿತವಾಗಿ ಗುರಿಯಾಗಿಸಲಾಗುತ್ತಿದ್ದು, ಈ ಕುರಿತು ಈಗಾಗಲೇ ಹಲವು ಹಾಲಿ-ಮಾಜಿ ಶಾಸಕರು ಹಾಗೂ ಸಚಿವರು ತಮ್ಮನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ ಎಂದು ತಿಳಿಸಿದರು. ‘ವಿದೇಶಗಳಲ್ಲಿ ಮೈನಿಂಗ್ ಮತ್ತು ಟ್ರೇಡಿಂಗ್ ಮಾಡುವ ಯೋಚನೆಯಿದ್ದು, ಹೂಡಿಕೆಗಾಗಿ ಬೇರೆ ಬೇರೆ ದೇಶಗಳಲ್ಲಿ ಹುಡುಕಾಟ ನಡೆಸುತ್ತಿದ್ದೆ, ಆದರೆ ಇನ್ನೂ ಯಾವುದೇ ಇನ್ವೆಸ್ಟ್‌ಮೆಂಟ್ ಮಾಡಿಲ್ಲ’ ಎಂದು ಸ್ಪಷ್ಟನೆ ನೀಡಿದ್ದಾರೆ. ‘ಇನ್ನು ದಾಳಿ ವೇಳೆ ಸಿಕ್ಕಿರುವ ಎರಡು ಕೋಟಿ ರೂ ಹಣದ ಮೂಲ ನಮ್ಮದೇ, ಅದು ಬೇರೆಯವರದ್ದಲ್ಲ. ನಮ್ಮ ಸಂಸ್ಥೆಯಲ್ಲಿ ವರ್ಷಕ್ಕೆ 2 ಸಾವಿರ ಕೋಟಿ ರೂ ವಹಿವಾಟು ನಡೆಯುತ್ತದೆ. ನಮ್ಮ ಮನೆಯಲ್ಲಿ ಕೆಲಸ ಮಾಡುವವರ ಸಂಬಳ ಒಂದು ಲಕ್ಷ ರೂ ಇದೆ. ಮಾರುಕಟ್ಟೆಗೆ ಹೋದರೆ ಒಂದು ಲಕ್ಷ ರೂ ಖರ್ಚು ಮಾಡುತ್ತಾರೆ ಎಂದರು.

Tags:

error: Content is protected !!