Dharwad

ಕಲಬುರಗಿಯಲ್ಲಿ ಮಾಜಿ ಸಿದ್ದರಾಮಯ್ಯ ಮೂರ್ತಿ ತೆರವು ವಿಚಾರಕ್ಕೆ ಧಾರವಾಡದಲ್ಲಿ ಆಕ್ರೋಶ… ಡಿಸಿ ಕಚೇರಿ ಮುಂಭಾಗದಲ್ಲಿ ಕುರುಬ ಸಮುದಾಯದ ಕಾರ್ಯಕರ್ತರಿಂದ ಪ್ರತಿಭಟನೆ.

Share

ಕಲಬುರಗಿಯಲ್ಲಿ ಅಹಿಂದ ನಾಯಕನೆಂದು ಖ್ಯಾತಿ ಪಡೆದುಕೊಂಡಿರುವ ಮಾಜಿ ಸಿಎಂ ಸಿದ್ದರಾಮಯ್ಯನವರು ಮೂರ್ತಿಯನ್ನು ಜಿಲ್ಲಾಡಳಿತ ಮತ್ತು ಪಾಲಿಕೆ ಅಧಿಕಾರಿಗಳು ತೆರವು ಮಾಡಿರುವುದನ್ನು ಖಂಡಿಸಿ ಹಾಗೂ ಮೂರ್ತಿ ಮರು ಸ್ಥಾಪಿಸಲು ಆಗ್ರಹಿಸಿ, ಧಾರವಾಡದಲ್ಲಿ ಕುರುಬ‌ ಸಮಾಜ ಪ್ರಮುಖರು ಪ್ರತಿಭಟನೆ ನಡೆಸಿ ಜಿಲ್ಲಾಡಳಿತ ಸೇರಿ ಪಾಲಿಕೆ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ‌

ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಕುರುಬ ಸಮಾಜದ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿ, ಕಲಬುರಗಿ ಜಿಲ್ಲಾಡಳಿತ ಹಾಗೂ ಪಾಲಿಕೆಯ ಅಧಿಕಾರಿಗಳ ವಿರುದ್ಧ ಧಿಕ್ಕಾರ ಕೂಗಿ ತಮ್ಮ ಆಕ್ರೋಶ ಹೊರ ಹಾಕಿದರು. ರಾಜ್ಯಕಂಡ ಧೀಮಂತ ನಾಯಕ ಮಾಜಿ ಸಿಎಂ ಸಿದ್ದರಾಮಯ್ಯನವರು ಸರ್ವ ಜನಾಂಗದ ಅಭಿವೃದ್ಧಿಗೆ ಶ್ರಮಿಸಿದವರಾಗಿದ್ದಾರೆ. ಸಿದ್ದರಾಮಯ್ಯನವರ ಬೆಂಬಲಿತರು ಮೂರ್ತಿಯನ್ನು ರಾತ್ರೋರಾತ್ರಿ ಪೂರ್ವಾನುಮತಿ ಇಲ್ಲದೆ ತಂದಿಟ್ಟಿದ್ದಾರೆ ಎಂಬ ಒಂದೇ ಒಂದು ಕಾರಣ ಮುಂದಿಟ್ಟುಕೊಂಡು ಮೂರ್ತಿ ತೆರವು ಮಾಡಿರುವುದು ಖಂಡನೀಯ. ಇದೂ ಕಲಬುರಗಿ ಜಿಲ್ಲಾಡಳಿತ ಮತ್ತು‌ಪಾಲಿಕೆ ಅಧಿಕಾರಿಗಳು ಅಹಿಂದ್ ನಾಯಕ ಸಿದ್ದರಾಮಯ್ಯನವರಿಗಷ್ಟೇಯಲ್ಲ ಇಡೀ ಅಹಿಂತ ವರ್ಗಕ್ಕೆ ಮಾಡಿದ ಅಪಮಾನವಾಗಿದೆ. ಈ ಕೂಡಲೇ ಅಲ್ಲಿಯ ಜಿಲ್ಲಾಡಳಿತ ಹಾಗೂ ಪಾಲಿಕೆ ಅಧಿಕಾರಿಗಳು ಮೂರ್ತಿ ಪ್ರತಿಷ್ಠಾಪಿಸಿದ ಜಾಗದಲ್ಲಿಯೇ ಮೂರ್ತಿಯನ್ನು ಸ್ಥಾಪಿಸಬೇಕು ಎಂದು ಆಗ್ರಹಿಸಿದರು. ಇಲ್ಲವಾದಲ್ಲಿ ರಾಜ್ಯವ್ಯಾಪಿ ನಮ್ಮ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದರು. ‌

Tags:

error: Content is protected !!