Vijaypura

ಗುಂಡಿನ ದಾಳಿ ನಡೆಸಿದ್ದ ಪೆಟ್ರೋಲ್ ಬಂಕ್ ಮಾಲೀಕನ ಬಂಧನ

Share

ಪೆಟ್ರೋಲ್ ಬಂಕ್ ಮಾಲೀಕನೋರ್ವ ನಡೆಸಿದ ಗುಂಡಿನ ದಾಳಿಯಲ್ಲಿ ಇಬ್ಬರು ಗಾಯಗೊಂಡಿರುವ ಜಿಲ್ಲೆಯ ಕೊಲ್ಲಾರ ತಾಲೂಕಿನ ಮಟ್ಟಿಹಾಳ ಗ್ರಾಮದಲ್ಲಿ ರವಿವಾರ ನಡೆದಿದೆ. ಸುಖದೇವ್ ಚಲವಾದಿ ಮತ್ತು ರಾಜು ಚಲವಾದಿ ಎಂಬುವರು ಗಾಯಗೊಂಡಿದ್ದು, ಆರೋಪಿ ಸಂಗಪ್ಪ ಪೂಜಾರಿ ಎಂಬಾತನನ್ನು ಈಗಾಗಲೇ ಪೊಲೀಸರು ವಶಕ್ಕೆ ಪಡೆದಿದ್ದಾರೆ.ಸುಖದೇವ್ ಚಲವಾದಿ ತಮ್ಮ ಸ್ನೇಹಿತನಾದ ರಾಜು ಜತೆಗೂಡಿ ಪೆಟ್ರೋಲ್‌ ಬಂಕ್‌ಗೆ ತೆರಳಿದ್ದ. ಈ ವೇಳೆ, ಯಾವುದೋ ವಿಷಯಕ್ಕೆ ಪೆಟ್ರೋಲ್ ಬಂಕ್ ಮಾಲೀಕನಾದ ಸಂಗಪ್ಪ ಪೂಜಾರಿ ಹಾಗೂ ಸುಖದೇವ್ ಇಬ್ಬರ ನಡುವೆ ಜಗಳ ಉಂಟಾಗಿದೆ. ಇದರಿಂದ ಬಂಕ್ ಮಾಲೀಕ ಸಂಗಪ್ಪ ತನ್ನ ಪರವಾನಗಿ ಪಿಸ್ತೂಲ್‌ನಿಂದ ಗುಂಡು ಹಾರಿಸಿದ್ದಾನೆ ಎಂದು ತಿಳಿದು ಬಂದಿದೆ. ಈ ಘಟನೆಯಲ್ಲಿ ಸುಖದೇವ್ ಹೊಟ್ಟೆ ಹಾಗೂ ಬೆನ್ನಿಗೆ ಭಾಗಕ್ಕೆ ಗಾಯಗಳಾಗಿವೆ. ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಗುಂಡಿನ ದಾಳಿಯ ವಿಷಯ ತಿಳಿದು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಲ್ಲದೇ, ಆರೋಪಿಯನ್ನೂ ವಶಕ್ಕೆ ಪಡೆದಿದ್ದಾರೆ. ಸದ್ಯ ಘಟನೆ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ತಿಳಿಸಿದ್ದಾರೆ.

Tags:

error: Content is protected !!