ಖಾನಾಪುರ ಪಟ್ಟಣದ ಸಾರ್ವಜನಿಕ ಗಣೇಶೋತ್ಸವದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಶ್ರಮಿಸಿದ ವಿವಿಧ ಜಿಲ್ಲೆಗಳ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಯನ್ನು ಸತ್ಕರಿಸಲಾಯಿತು. ಖಾನಾಪುರ ಬಾರ್ ಅಸೋಸಿಯೇಷನ್ ಅಧ್ಯಕ್ಷ ಹಾಗೂ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಘಟಕದ ಅಧ್ಯಕ್ಷ ನ್ಯಾಯವಾದಿ ಈಶ್ವರ ಘಾಡಿ ಅವರು ಪೊಲೀಸರಿಗೆ ಹೂಮಾಲೆ ಹಾಕಿ ಗೌರವಿಸಿದರು.

ಖಾನಾಪುರದಲ್ಲಿ ಸಾರ್ವಜನಿಕ ಗಣೇಶೋತ್ಸವವು ಶಾಂತಿಯುತ ಹಾಗೂ ಸುವ್ಯವಸ್ಥಿತವಾಗಿ ನೆರವೇರಲು ಶ್ರಮಿಸಿದ ಹೊರಜಿಲ್ಲೆಯ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಖಾನಾಪುರ ಬಾರ್ ಅಸೋಸಿಯೇಷನ್ ಅಧ್ಯಕ್ಷ ನ್ಯಾಯವಾದಿ ಈಶ್ವರ ಘಾಡಿ ಅವರು ಮಾಲಾರ್ಪಣೆ ಮಾಡಿ ಗೌರವಿಸಿದರು. ಬೆಳಗಾವಿ ಎಸ್ಪಿ ಹಾಗೂ ನಾರಾಯಣ ಭರಮನಿ ಅವರ ಮಾರ್ಗದರ್ಶನದಲ್ಲಿ ಸಾರ್ವಜನಿಕರಿಗೆ ಯಾವುದೇ ಅಡಚಣೆಯಾಗದಂತೆ ದರ್ಶನಕ್ಕೆ ವ್ಯವಸ್ಥೆ ಮಾಡಿದ್ದಕ್ಕಾಗಿ ಪೊಲೀಸರ ಕಾರ್ಯವನ್ನು ಶ್ಲಾಘಿಸಿದ ಅವರು, “ಖಾಕಿ ಎಂದರೆ ಜನರ ಮಿತ್ರ, ಪೊಲೀಸ್ ಈಸ್ ಪ್ರೈಡ್ ಆಫ್ ಪಬ್ಲಿಕ್” ಎಂದು ಬಣ್ಣಿಸಿದರು. ಈ ಸೌಹಾರ್ದಯುತ ವಾತಾವರಣ ನಿರ್ಮಿಸಿದ ಈಶ್ವರ ಘಾಡಿ ಅವರ ಗೌರವ ಸತ್ಕಾರದ ನಡೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಮೆಚ್ಚುಗೆಗೆ ಪಾತ್ರವಾಗಿದ್ದು, ಕಾರ್ಯಕ್ರಮದಲ್ಲಿ ನ್ಯಾಯವಾದಿ ಆರ್.ಎಸ್. ಪಾಟೀಲ ಸೇರಿದಂತೆ ಹಲವು ಪ್ರಮುಖರು ಉಪಸ್ಥಿತರಿದ್ದರು.
