ಬೆಳಗಾವಿ ಗ್ರಾಮಾಂತರ ಪ್ರದೇಶದ ಶಿಕ್ಷಣ ಕ್ಷೇತ್ರಕ್ಕೆ ಮತ್ತೊಂದು ಹೆಮ್ಮೆಯ ಗರಿ ಲಭಿಸಿದ್ದು, ಜಾಫರವಾಡಿ ಕಡೋಲಿ ಶಾಲೆಯ ಮುಖ್ಯಶಿಕ್ಷಕಿ ಪ್ರಭಾವತಿ ಹಾಲೆನ್ನವರ ಅವರಿಗೆ ರಾಜ್ಯಮಟ್ಟದ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ ಒಲಿದುಬಂದಿದೆ. ಮಕ್ಕಳ ಭವಿಷ್ಯ ರೂಪಿಸುವಲ್ಲಿ ಇವರು ತೋರಿದ ನಿರಷ್ಠೆ ಹಾಗೂ ಕಠಿಣ ಪರಿಶ್ರಮಕ್ಕೆ ಸಿಕ್ಕ ಈ ಮಹತ್ವದ ಪುರಸ್ಕಾರದಿಂದ ಬೆಳಗಾವಿ ಜಿಲ್ಲೆಯ ಕೀರ್ತಿ ಪತಾಕೆ ಮತ್ತಷ್ಟು ಹಾರಿದೆ.

ಬೆಳಗಾವಿ ಶೈಕ್ಷಣಿಕ ಜಿಲ್ಲೆಯ ಬೆಳಗಾವಿ ಗ್ರಾಮಾಂತರ ವಲಯದ ಜಫರವಾಡಿ ಕಡೋಲಿ ಮರಾಠಿ ಹಿರಿಯ ಪ್ರಾಥಮಿಕ ಶಾಲೆಯ ಸಮರ್ಪಿತ ಮುಖ್ಯಶಿಕ್ಷಕರಾದ ಪ್ರಭಾವತಿ ಬಾಳಪ್ಪ ಹಾಲೆನ್ನವರ ಅವರು ತಮ್ಮ ಶ್ರೇಷ್ಠ ಶೈಕ್ಷಣಿಕ ಸೇವೆ ಹಾಗೂ ಬೋಧನಾ ಸಾಧನೆಗಾಗಿ ಪ್ರತಿಷ್ಠಿತ ರಾಜ್ಯಮಟ್ಟದ ಶಿಕ್ಷಕರ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಶಿಕ್ಷಣ ಕ್ಷೇತ್ರದಲ್ಲಿ ಅವರು ಸಲ್ಲಿಸಿದ ಗಣನೀಯ ಸೇವೆಯನ್ನು ಗುರುತಿಸಿ ಈ ಗೌರವ ನೀಡಲಾಗಿದ್ದು, ಶಾಲೆಗೆ ಹಾಗೂ ಇಡೀ ಜಿಲ್ಲೆಗೆ ಕೀರ್ತಿ ತಂದಿರುವ ಇವರ ಸಾಧನೆಗೆ ಶಿಕ್ಷಣ ವಲಯದಿಂದ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ.
