Khanapur

ಬೀಡಿ ಪೂರ್ವದಲ್ಲಿ ‘ಪ್ರಜಾ ಸೇವಾ ಆಂದೋಲನ’ ಯಶಸ್ವಿ: ಶಾಸಕ ವಿಠ್ಠಲ ಹಲಗೇಕರ ಚಾಲನೆ

Share

ಖಾನಾಪೂರ ತಾಲೂಕಿನ ಬೀಡಿ ಗ್ರಾಮದಲ್ಲಿ ಆಯೋಜಿಸಿದ್ದ ಹೋಬಳಿ ಮಟ್ಟದ ‘ಪ್ರಜಾ ಸೇವಾ ಆಂದೋಲನ’ ಸಭೆಗೆ ಶಾಸಕ ವಿಠ್ಠಲ ಹಲಗೇಕರ ಚಾಲನೆ ನೀಡಿದರು. ಸಾರ್ವಜನಿಕರ ಅಹವಾಲುಗಳನ್ನು ನೇರವಾಗಿ ಆಲಿಸಿದ ಅವರು, ಸಮಸ್ಯೆಗಳಿಗೆ ಕೂಡಲೇ ಪರಿಹಾರ ಒದಗಿಸುವಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ಹೊರಡಿಸಿದರು.


ಕರ್ನಾಟಕ ಸರ್ಕಾರ ಹಾಗೂ ತಾಲೂಕಾ ಆಡಳಿತದ ಸಂಯುಕ್ತಾಶ್ರಯದಲ್ಲಿ ಖಾನಾಪೂರ ಗ್ರಾಮೀಣ ವ್ಯಾಪ್ತಿಯ ಬೀಡಿ ಗ್ರಾಮದಲ್ಲಿ ಹಮ್ಮಿಕೊಳ್ಳಲಾಗಿದ್ದ ‘ಹೋಬಳಿ ಮಟ್ಟದ ಪ್ರಜಾ ಸೇವಾ ಆಂದೋಲನ’ ಸಭೆಯು ಶಾಸಕ ವಿಠ್ಠಲ ಹಲಗೇಕರ ಅವರ ನೇತೃತ್ವದಲ್ಲಿ ಯಶಸ್ವಿಯಾಗಿ ನೆರವೇರಿತು. ಈ ಜನಸಂವಾದ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಶಾಸಕರು, ಸರ್ಕಾರದ ಸೌಲಭ್ಯಗಳು ತಳಮಟ್ಟದ ಪ್ರತಿಯೊಬ್ಬರಿಗೂ ತಲುಪಿಸುವುದು ಹಾಗೂ ಜನರ ಸಮಸ್ಯೆಗಳನ್ನು ಕಾಲಮಿತಿಯಲ್ಲಿ ಪಾರದರ್ಶಕವಾಗಿ ಬಗೆಹರಿಸುವುದೇ ಸರ್ಕಾರದ ಮುಖ್ಯ ಗುರಿಯಾಗಿದೆ ಎಂದು ತಿಳಿಸಿದರು. ಈ ಮಹತ್ವದ ಕಾರ್ಯಕ್ರಮದಲ್ಲಿ ತಹಶೀಲ್ದಾರ್ ಸೇರಿದಂತೆ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಹಾಗೂ ಗ್ರಾಮಸ್ಥರು ದೊಡ್ಡ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.

Tags:

error: Content is protected !!