Belagavi

ಪ್ರಧಾನಿ ಮೋದಿ ಸಾರ್ವಜನಿಕ ಸೇವೆಗೆ 25 ವರ್ಷ…

Share

ದೇಶದ ಜನತೆಯ ಸೇವೆಗೆ ಪ್ರಧಾನಿ ನರೇಂದ್ರ ಮೋದಿಯವರು ಕೇವಲ ರಾಜಕಾರಣಿಯಲ್ಲದೆ, ದಕ್ಷ ಆಡಳಿತಗಾರರಾಗಿ ಸತತ 25 ವರ್ಷಗಳನ್ನು ಪೂರೈಸಿದ್ದಾರೆ. ಈ ಹಿನ್ನೆಲೆಯಲ್ಲಿ ಬೆಳಗಾವಿ ದಕ್ಷಿಣ ಮತಕ್ಷೇತ್ರದ ಶಾಸಕ ಅಭಯ್ ಪಾಟೀಲ್ ನೇತೃತ್ವದಲ್ಲಿ ಕ್ಷೇತ್ರದಾದ್ಯಂತ 53 ಸಾವಿರ ಮನೆಗಳಲ್ಲಿ ದೀಪ ಹಚ್ಚುವ ಮೂಲಕ ವಿಶೇಷ ಅಭಿಯಾನ ಹಾಗೂ ಕಲಾಮಂದಿರದಲ್ಲಿ ಬೃಹತ್ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಪ್ರಧಾನಿ ನರೇಂದ್ರ ಮೋದಿಯವರು 13 ವರ್ಷಗಳ ಕಾಲ ಮುಖ್ಯಮಂತ್ರಿಯಾಗಿ ಮತ್ತು 12 ವರ್ಷಗಳಿಂದ ಪ್ರಧಾನ ಮಂತ್ರಿಯಾಗಿ ಒಟ್ಟು 25 ವರ್ಷಗಳ ಕಾಲ ಯಾವುದೇ ಕಳಂಕವಿಲ್ಲದೆ ದೇಶದ ಸೇವೆ ಸಲ್ಲಿಸಿರುವ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಮೋದಿಯವರಿಗೆ ಉತ್ತಮ ಆರೋಗ್ಯ ಮತ್ತು ದೀರ್ಘಾಯುಸ್ಸು ಸಿಗಲಿ ಎಂದು ಪ್ರಾರ್ಥಿಸಿ, ಮುಂಬರುವ ಸೆಪ್ಟೆಂಬರ್ 17 ರ ಗುರುವಾರದಂದು ಬೆಳಗಾವಿ ದಕ್ಷಿಣ ಮತಕ್ಷೇತ್ರದ 53,000 ಮನೆಗಳಲ್ಲಿ ದೀಪ ಹಚ್ಚಿ ವಿಶೇಷ ಪ್ರಾರ್ಥನೆ ಸಲ್ಲಿಸಲು ತೀರ್ಮಾನಿಸಲಾಗಿದೆ. ಅಂದೇ ಸಂಜೆ 7 ಗಂಟೆಗೆ ಕಲಾಮಂದಿರದಲ್ಲಿ 1,000 ದೀಪಗಳನ್ನು ಹಚ್ಚಿ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಈ ಎರಡೂ ಸತ್ಕಾರ್ಯಗಳಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಶಾಸಕರು ವಿನಂತಿಸಿದ್ದಾರೆ.

Tags:

error: Content is protected !!