hubbali

ವಿವಿಧ ಬೇಡಿಕೆ ಈಡೇರಿಸಲು ಆಗ್ರಹಿಸಿ ಬ್ಯಾಂಕ್ ನೌಕರಿಂದ ಪ್ರತಿಭಟನೆ

Share

ವಾರದಲ್ಲಿ ಐದು ದಿನಗಳ ಕೆಲಸ ಹಾಗೂ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಹುಬ್ಬಳ್ಳಿಯಲ್ಲಿ ಬ್ಯಾಂಕ್ ನೌಕರರ ಸಂಘಟನೆಗಳ ಸಂಯುಕ್ತ ವೇದಿಕೆ ನೇತೃತ್ವದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಯುನಿಯನ್ ಆಫ್ ಇಂಡಿಯಾ ಕಚೇರಿ ಮುಂದೆ ಜಮಾಯಿಸಿದ ನೌಕರರು ಕೇಂದ್ರ ಸರ್ಕಾರದ ಧೋರಣೆಯ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ವಾರದಲ್ಲಿ ಐದು ದಿನಗಳ ಕೆಲಸದ ನಿಯಮ ಜಾರಿ ಗೊಳಿಸಬೇಕು ಎಂಬುದು ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಶುಕ್ರವಾರ ಹುಬ್ಬಳ್ಳಿಯಲ್ಲಿಯೂ ಸಹ ಬ್ಯಾಂಕ್‌ ನೌಕರರ ಸಂಘಟನೆಗಳ ಸಂಯುಕ್ತ ವೇದಿಕೆ (ಯುಎಫ್‌ಬಿಯು) ಮುಷ್ಕರ ಆರಂಭಿಸಿದ್ದು ಡಾ. ಅಂಬೇಡ್ಕರ್ ಸರ್ಕಲ್ ಸಮೀಪದ ಯುನಿಯನ್ ಆಫ್ ಇಂಡಿಯಾ ಕಚೇರಿ ಮುಂದೆ ಪ್ರತಿಭಟನೆ ಮಾಡಿದರು.
ಹೆಚ್ಚುವರಿ ಸಿಬ್ಬಂದಿ ನೇಮಕ, ಪಿಂಚಣಿ ಪರಿಷ್ಕರಣೆ, ಗ್ರಾಚ್ಯುಟಿ ಮಿತಿ ಹೆಚ್ಚಳ ಸೇರಿದಂತೆ ಹಲವು ಬೇಡಿಕೆಗಳು ಇನ್ನೂ ಬಾಕಿ ಉಳಿದಿವೆ. ಈ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಲಾಯಿತು. ಭಾರತೀಯ ರಾಷ್ಟ್ರೀಯ ಬ್ಯಾಂಕ್‌ ಉದ್ಯೋಗಿಗಳ ಒಕ್ಕೂಟದ ಪದಾಧಿಕಾರಿಗಳು ಭಾಗವಹಿಸಿದ್ದರು.

Tags:

error: Content is protected !!