ರೌಡಿ ಶೀಟರ್‌ವೊಬ್ಬನನ್ನು ಹಾಡು ಹಗಲೇ ಕೊಲೆ ಮಾಡಿರುವ ಘಟನೆ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಲಚ್ಯಾಣ ಗ್ರಾಮದಲ್ಲಿ ನಡೆದಿದೆ.

ಲಚ್ಯಾಣ ಗ್ರಾಮದ ಸುಖದೇವ್ ಭಂಡಾರಿ (32) ಕೊಲೆಯಾದ ವ್ಯಕ್ತಿ. ಹಳೆ ವೈಷಮ್ಯದ ಹಿನ್ನೆಲೆಯಲ್ಲಿ ಕೊಲೆ ನಡೆದಿರಬಹುದು ಎಂದು ಶಂಕಿಸಲಾಗಿದೆ.
ದುಷ್ಕರ್ಮಿಗಳು ಸುಖದೇವ್‌ನನ್ನು ಕೊಲೆಗೈದು ಸ್ಥಳದಿಂದ ಪರಾರಿಯಾಗಿದ್ದಾರೆ. ಘಟನೆ ಕುರಿತು ಮಾಹಿತಿ ತಿಳಿಯುತ್ತಿದ್ದಂತೆ ಇಂಡಿ ಗ್ರಾಮೀಣ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಘಟನೆ ಇಂಡಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಕೊಲೆಗೆ ನಿಖರ ಕಾರಣ ಹಾಗೂ ಆರೋಪಿಗಳ ಪತ್ತೆಗಾಗಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
