ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಸಂಪಗಾವಿ ಗ್ರಾಮದಲ್ಲಿ ಸಾರಿಗೆ ಬಸ್‌ಗಳ ಅಸಮರ್ಪಕ ವ್ಯವಸ್ಥೆಯಿಂದ ಬೇಸತ್ತ ವಿದ್ಯಾರ್ಥಿಗಳು ರಸ್ತೆಗಿಳಿದು ದಿಢೀರ್ ಪ್ರತಿಭಟನೆ ನಡೆಸಿರುವ ಘಟನೆ ವರದಿಯಾಗಿದೆ. ನಿಗದಿತ ಸಮಯಕ್ಕೆ ಸರಿಯಾಗಿ ಬಸ್‌ಗಳು ಬಾರದಿರುವುದು ಮತ್ತು ಇದ್ದರೂ ಸಿಬ್ಬಂದಿ ಬೇಕಾಬಿಟ್ಟಿ ವರ್ತಿಸುತ್ತಿರುವುದರಿಂದ ವಿದ್ಯಾರ್ಥಿಗಳ ಶಾಲಾ-ಕಾಲೇಜು ವಿದ್ಯಾಭ್ಯಾಸಕ್ಕೆ ತೀವ್ರ ಅಡ್ಡಿಯುಂಟಾಗಿದೆ.

ಬೆಳಗಾವಿ ಜಿಲ್ಲೆಯ ಸಂಪಗಾವಿ ಗ್ರಾಮದಲ್ಲಿ ಬಸ್ ಸೌಲಭ್ಯವಿಲ್ಲದೆ ಪರದಾಡುತ್ತಿರುವ ವಿದ್ಯಾರ್ಥಿಗಳು ದಿಢೀರ್ ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕಿದ್ದಾರೆ. ಸಮಯಕ್ಕೆ ಸರಿಯಾಗಿ ಬಸ್ ಬಾರದಿರುವುದು ಮತ್ತು ಸಿಬ್ಬಂದಿಯ ನಿರ್ಲಕ್ಷ್ಯದಿಂದ ನೊಂದ ವಿದ್ಯಾರ್ಥಿಗಳು ರಸ್ತೆ ತಡೆದು ಆಕ್ರೋಶ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಸ್ಥಳದಲ್ಲಿ ಕೆಲಕಾಲ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು.
ಕೇವಲ ಬೆರಳೆಣಿಕೆಯ ಪ್ರಯಾಣಿಕರನ್ನು ಹತ್ತಿಸಿಕೊಂಡು ಬಸ್ ಚಲಾಯಿಸುವುದು ಹಾಗೂ ನಿಲುಗಡೆ ನಿಯಮಗಳನ್ನು ಪಾಲಿಸದ ಚಾಲಕ-ನಿರ್ವಾಹಕರ ವಿರುದ್ಧ ವಿದ್ಯಾರ್ಥಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಸ್ಥಳಕ್ಕೆ ಆಗಮಿಸಿದ ಅಧಿಕಾರಿಗಳು ಮತ್ತು ಸಾರ್ವಜನಿಕರ ನಡುವೆ ಮಾತಿನ ಚಕಮಕಿ ನಡೆದಿದ್ದು, ಕೂಡಲೇ ಸಮರ್ಪಕ ಬಸ್ ವ್ಯವಸ್ಥೆ ಕಲ್ಪಿಸಿಕೊಡುವಂತೆ ಆಗ್ರಹಿಸಿ ವಿದ್ಯಾರ್ಥಿಗಳು ಪಟ್ಟು ಹಿಡಿದರು.
