Vijaypura

ಸ್ಕೂಟಿ-ಲಾರಿ ಮುಖಾಮುಖಿ ಡಿಕ್ಕಿ; ಸವಾರ ಸಾವು

Share

ವಿಜಯಪುರ ನಗರದ ರಾಮನಗರ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ.
ಸ್ಕೂಟಿ ಹಾಗೂ ಲಾರಿ ಮುಖಾಮುಖಿ ಡಿಕ್ಕಿಯಾಗಿ ಸ್ಕೂಟಿ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮೃತರನ್ನು ನಿಂಗರಾಜು ಎಂದು ಗುರುತಿಸಲಾಗಿದೆ.
ನಿಂಗರಾಜು ಅವರು ಮಹಾರಾಷ್ಟ್ರದ ಜತ್ತ್ ನಿವಾಸಿಯಾಗಿದ್ದು, ಸದ್ಯ ವಿಜಯಪುರದ ಸಿಂದಗಿ ಬೈಪಾಸ್‌ನಲ್ಲಿ ವಾಸವಾಗಿದ್ದರು ಎನ್ನಲಾಗಿದೆ.
ಲಾರಿ ಚಾಲಕನ ನಿರ್ಲಕ್ಷ್ಯದಿಂದಲೇ ಅಪಘಾತ ಸಂಭವಿಸಿದೆ ಎಂದು ಆರೋಪಿಸಲಾಗಿದೆ.
ಅಪಘಾತದ ಬಳಿಕ ಲಾರಿಯನ್ನು ಸ್ಥಳದಲ್ಲೇ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ.
ವಿಷಯ ತಿಳಿದು ಸ್ಥಳಕ್ಕೆ ವಿಜಯಪುರ ಸಂಚಾರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಈ ಘಟನೆ ವಿಜಯಪುರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಅಪಘಾತಕ್ಕೆ ಸಂಬಂಧಿಸಿದಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

Tags:

error: Content is protected !!