Kagawad

ಉಗಾರ ಶ್ರೀ ಪದ್ಮಾವತಿ ಮಂದಿರದಲ್ಲಿ ಶ್ರಾವಣ ಶುಕ್ರವಾರ ವಿಶೇಷ ಪೂಜೆ

Share

ಕರ್ನಾಟಕ ಹಾಗೂ ಮಹಾರಾಷ್ಟ್ರ ರಾಜ್ಯದ ಲಕ್ಷಾಂತರ ಭಕ್ತರ ಶ್ರದ್ಧಾ ಕೇಂದ್ರವಾಗಿರುವ ಕಾಗವಾಡ ತಾಲೂಕಿನ ಉಗಾರ ಗ್ರಾಮದ ಶ್ರೀ ಪದ್ಮಾವತಿ ಮಾತೆಯ ದೇವಸ್ಥಾನದಲ್ಲಿ ಶ್ರಾವಣ ಮಾಸದ ಕೊನೆಯ ಶುಕ್ರವಾರದ ನಿಮಿತ್ತ ವಿಶೇಷ ಪೂಜಾ ಕಾರ್ಯಕ್ರಮಗಳು ಭಕ್ತಿಭಾವದಿಂದ ನೆರವೇರಿದವು. ಈ ಸಂದರ್ಭದಲ್ಲಿ ಎರಡು ರಾಜ್ಯಗಳ ಗಡಿಭಾಗದ ವಿವಿಧ ಗ್ರಾಮಗಳಿಂದ ಸಾವಿರಾರು ಭಕ್ತರು ಆಗಮಿಸಿ ದೇವಿಯ ದರ್ಶನ ಪಡೆದು ಪುನೀತರಾದರು.

ಉಗಾರದ ಪ್ರಸಿದ್ಧ ಕ್ಷೇತ್ರವಾಗಿರುವ ಶ್ರೀ ಪದ್ಮಾವತಿ ಮಾತೆಯ ಮಂದಿರದಲ್ಲಿ ಶ್ರಾವಣ ಮಾಸದ ಐದು ಶುಕ್ರವಾರಗಳಂದು ವಿಶೇಷ ಪೂಜೆ ಹಾಗೂ ಆರಾಧನಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ಶ್ರಾವಣ ಮಾಸದ ಈ ಪವಿತ್ರ ದಿನಗಳಲ್ಲಿ ದೇವಿಯ ದರ್ಶನ ಪಡೆದು ಹರಕೆ ತೀರಿಸಿಕೊಳ್ಳಲು ಕರ್ನಾಟಕ ಹಾಗೂ ಮಹಾರಾಷ್ಟ್ರದ ವಿವಿಧ ಭಾಗಗಳಿಂದ ಅಪಾರ ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಾರೆ.

ಶ್ರಾವಣ ಮಾಸದ ಕೊನೆಯ ಶುಕ್ರವಾರದಂದು ಮಂದಿರದ ಮುಖ್ಯಸ್ಥ ಶೀತಲಗೌಡ ಪಾಟೀಲ್ ಹಾಗೂ ಅವರ ಪರಿವಾರದವರ ಉಪಸ್ಥಿತಿಯಲ್ಲಿ ಅರ್ಚಕ ಅಶೋಕ್ ಉಪಾಧ್ಯಾಯ ಅವರ ನೇತೃತ್ವದಲ್ಲಿ ಬೆಳಿಗ್ಗೆ ಜಲಾಭಿಷೇಕ, ಕುಂಕುಮಾರ್ಚನೆ, ಪಂಚಾಮೃತ ಅಭಿಷೇಕ ಹಾಗೂ ಉಡಿ ತುಂಬುವ ಕಾರ್ಯಕ್ರಮಗಳು ಭಕ್ತಿಭಾವದಿಂದ ನೆರವೇರಿದವು. ವಿಶೇಷ ಪೂಜಾ ಕಾರ್ಯಕ್ರಮಗಳನ್ನು ಕಣ್ತುಂಬಿಕೊಳ್ಳಲು ಹಾಗೂ ದೇವಿಯ ದರ್ಶನ ಪಡೆಯಲು ಅನೇಕ ಭಕ್ತರು ಮಂದಿರಕ್ಕೆ ಆಗಮಿಸಿದ್ದರು.

Tags:

error: Content is protected !!