State

ಸಿಎಂ ಭೇಟಿಯಾದ ಶ್ರೀ ಪ್ರಣವಾನಂದಪುರಿ ಸ್ವಾಮೀಜಿ: ಸಮುದಾಯದ ವಿಷಯಗಳ ಕುರಿತು ಚರ್ಚೆ

Share

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ವಹ್ನಿ ಕುಲ ಸಮುದಾಯದ ಶ್ರೀ ಪ್ರಣವಾನಂದಪುರಿ ಸ್ವಾಮೀಜಿ ಭೇಟಿಯಾಗಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಈ ಸಭೆಯಲ್ಲಿ ಸಮುದಾಯದ ಪ್ರಮುಖ ಮುಖಂಡರು ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಪ್ರಮುಖ ವಿಷಯಗಳ ಕುರಿತು ಸಮಾಲೋಚನೆ ನಡೆಸಲಾಯಿತು.

ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನು ಗೃಹ ಕಚೇರಿ ‘ಕೃಷ್ಣಾ’ದಲ್ಲಿ ವಹ್ನಿ ಕುಲ ಕ್ಷತ್ರಿಯ ಸಮುದಾಯದ ಪರಮಪೂಜ್ಯ ಶ್ರೀ ಪ್ರಣವಾನಂದಪುರಿ ಸ್ವಾಮೀಜಿ ಅವರ ನೇತೃತ್ವದ ಮುಖಂಡರ ನಿಯೋಗವು ಗುರುವಾರ ಭೇಟಿ ಮಾಡಿ ಮಹತ್ವದ ಸಮಾಲೋಚನೆ ನಡೆಸಿತು. ಈ ಸೌಹಾರ್ದಯುತ ಭೇಟಿಯ ಸಂದರ್ಭದಲ್ಲಿ ಸಮುದಾಯದ ಏಳಿಗೆ ಹಾಗೂ ವಿವಿಧ ಬೇಡಿಕೆಗಳ ಕುರಿತು ಚರ್ಚಿಸಲಾಯಿತು. ಈ ವೇಳೆ ಕಿಯೋನಿಕ್ಸ್ ಅಧ್ಯಕ್ಷರು ಹಾಗೂ ಶಾಸಕರಾದ ಶರತ್ ಬಚ್ಚೇಗೌಡ ಸೇರಿದಂತೆ ಹಲವು ಪ್ರಮುಖ ಜನಪ್ರತಿನಿಧಿಗಳು ಮತ್ತು ಸಮುದಾಯದ ಹಿರಿಯ ಮುಖಂಡರು ಉಪಸ್ಥಿತರಿದ್ದರು.

Tags:

error: Content is protected !!