State

69ನೇ ಕಾಮನ್‌ವೆಲ್ತ್ ಸಂಸದೀಯ ಸಮ್ಮೇಳನ: ಲೋಕಸಭಾ ಸ್ಪೀಕರ್ ಜೊತೆ ಮಹತ್ವದ ಸಮಾಲೋಚನೆ ನಡೆಸಿದ ಕರ್ನಾಟಕ ನಿಯೋಗ!

Share

ದಕ್ಷಿಣ ಆಫ್ರಿಕಾದಲ್ಲಿ ನಡೆಯಲಿರುವ ಪ್ರತಿಷ್ಠಿತ 69ನೇ ಕಾಮನ್‌ವೆಲ್ತ್ ಸಂಸದೀಯ ಸಮ್ಮೇಳನದಲ್ಲಿ ಕರ್ನಾಟಕದ ಪಾಲ್ಗೊಳ್ಳುವಿಕೆ ಹಾಗೂ ಸಿದ್ಧತೆಗಳ ಕುರಿತು ನವದೆಹಲಿಯಲ್ಲಿ ಮಹತ್ವದ ಸಭೆ ಜರುಗಿದೆ. ಲೋಕಸಭಾ ಸ್ಪೀಕರ್ ಅವರ ಸಮ್ಮುಖದಲ್ಲಿ ರಾಜ್ಯದ ನಿಯೋಗವು ವಿವಿಧ ವಿಷಯಗಳ ಬಗ್ಗೆ ಚರ್ಚೆ ನಡೆಸಿದೆ.
ದಿನಾಂಕ 01.09.2026 ರಂದು ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷರಾದ ಗುರುಪಾದನಗೌಡ ಸಂಗನಗೌಡ ಪಾಟೀಲ ಅವರು ದಕ್ಷಿಣ ಆಫ್ರಿಕಾದ ಕೇಪ್ ಟೌನ್‌ನಲ್ಲಿ ಸೆಪ್ಟೆಂಬರ್ 13 ರಿಂದ 19ರವರೆಗೆ ನಡೆಯಲಿರುವ 69ನೇ ಕಾಮನ್‌ವೆಲ್ತ್ ಸಂಸದೀಯ ಸಮ್ಮೇಳನಕ್ಕೆ (CPC) ಕರ್ನಾಟಕ ನಿಯೋಗವನ್ನು ಮುನ್ನಡೆಸಲಿದ್ದು, ಈ ಹಿನ್ನೆಲೆಯಲ್ಲಿ ನವದೆಹಲಿಯ ಪಾರ್ಲಿಮೆಂಟ್ ಹೌಸ್ ಅನೆಕ್ಸ್ ಮುಖ್ಯ ಸಮಿತಿ ಸಭಾಂಗಣದಲ್ಲಿ ಲೋಕಸಭಾ ಸಭಾಧ್ಯಕ್ಷರಾದ ಓಂ ಬಿರ್ಲಾ ಹಾಗೂ ರಾಜ್ಯಸಭೆಯ ಉಪಸಭಾಪತಿ ಹರಿವಂಶ್ ನಾರಾಯಣ್ ಸಿಂಗ್ ಅವರೊಂದಿಗೆ ಮಹತ್ವದ ಚರ್ಚೆ ನಡೆಸಿ, ಸಮ್ಮೇಳನದ ಸಿದ್ಧತೆಗಳು, ಸಂಸದೀಯ ವ್ಯವಸ್ಥೆಯ ಬಲವರ್ಧನೆ ಹಾಗೂ ಪರಸ್ಪರ ಸಹಕಾರದ ಕುರಿತು ಅಭಿಪ್ರಾಯ ವಿನಿಮಯ ಮಾಡಿಕೊಂಡಿದ್ದು, ಈ ಸಂದರ್ಭದಲ್ಲಿ ಕರ್ನಾಟಕ ವಿಧಾನ ಪರಿಷತ್ ಸಭಾಪತಿಗಳಾದ ಸಲೀಮ್ ಅಹ್ಮದ್ ಸೇರಿದಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಅಧಿಕಾರಿಗಳು ಉಪಸ್ಥಿತರಿದ್ದರು.

Tags:

error: Content is protected !!