ಮಳೆಯಿಂದ ತಪ್ಪಿಸಿಕೊಳ್ಳಲು ರಸ್ತೆಯಲ್ಲಿ ಓಡೋಗುತ್ತಿದ್ದ ವ್ಯಕ್ತಿಯೊಬ್ಬರು ಸಾರಿಗೆ ಬಸ್ ಗೆ ಡಿಕ್ಕಿಹೊಡೆದು ದುರ್ಮರಣಕ್ಕೀಡಾಗಿರುವ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆ ಬಸ್ ನಿಲ್ದಾಣದ ಎದುರುಗಡೆ ನಡೆದಿದೆ.

ವಿಜಯನಗರ ಜಿಲ್ಲೆಯ ಹೊಸಪೇಟೆ ಪಟ್ಟಣದ ಬಸ್ ನಿಲ್ದಾಣದ ಎದುರುಗಡೆ ಭೀಕರ ಅಪಘಾತ ಸಂಭವಿಸಿದ್ದು, ಮಳೆಯಿಂದ ತಪ್ಪಿಸಿಕೊಳ್ಳಲು ಯತ್ನಿಸಿದ ವ್ಯಕ್ತಿಯೊಬ್ಬರು ಸಾರಿಗೆ ಬಸ್ ಗೆ ಡಿಕ್ಕಿಹೊಡೆದು ಸಾವನ್ನಪ್ಪಿದ್ದಾರೆ. ಜೋರಾಗಿ ಸುರಿಯುತ್ತಿದ್ದ ಮಳೆಯಿಂದ ರಕ್ಷಣೆ ಪಡೆಯಲು ವ್ಯಕ್ತಿಯೊಬ್ಬರು ರಸ್ತೆಯಲ್ಲಿ ಆತುರದಿಂದ ಓಡಾಡಿಕೊಂಡಿದ್ದ ಸಮಯದಲ್ಲಿ ಈ ದುರ್ಘಟನೆ ಸಂಭವಿಸಿದೆ. ಓಡುವ ತರಾತುರಿಯಲ್ಲಿ ಸಾರಿಗೆ ಬಸ್ ಗೆ ಡಿಕ್ಕಿ ಹೊಡೆದ ಪರಿಣಾಮ ಆ ವ್ಯಕ್ತಿ ಗಂಭೀರವಾಗಿ ಗಾಯಗೊಂಡು ಮೃತಪಟ್ಟಿದ್ದಾರೆ. ಘಟನೆ ಕುರಿತು ಮಾಹಿತಿ ತಿಳಿದ ಕೂಡಲೇ ಹೊಸಪೇಟೆ ಪಟ್ಟಣ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ ಹಾಗೂ ಮುಂದಿನ ತನಿಖೆ ಕೈಗೊಂಡಿದ್ದಾರೆ.
