ರಾಜ್ಯ ಸರ್ಕಾರ ಅವೈಜ್ಞಾನಿಕವಾಗಿ ಬರ ಘೋಷಣೆ ಮಾಡಿದೆ ಎಂದು ಬಿಜೆಪಿ ರೈತ ಮೋರ್ಚಾ ರಾಜ್ಯ ಘಟಕದ ಅಧ್ಯಕ್ಷ ಎ.ಎಸ್. ಪಾಟೀಲ ನಡಹಳ್ಳಿ ಆರೋಪಿಸಿದ್ದಾರೆ. ವಿಜಯಪುರ ನಗರದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು ರಾಜ್ಯದ 190 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಿ, ಸಂಕಷ್ಟದಲ್ಲಿರುವ ರೈತರ ಸಾಲಮನ್ನಾ ಮಾಡಬೇಕು. ಪ್ರತಿ ಎಕರೆಗೆ ₹25 ಸಾವಿರ ಪರಿಹಾರ ನೀಡಬೇಕು ಎಂದು ಅವರು ಆಗ್ರಹಿಸಿದ್ದಾರೆ. ಸರ್ಕಾರ ರೈತರ ಸಮಸ್ಯೆಗಳಿಗೆ ಸ್ಪಂದಿಸದಿದ್ದರೆ ಬಿಜೆಪಿಯಿಂದ ಶೀಘ್ರದಲ್ಲೇ ‘ಗ್ರಾಮ ಚಲೋ’ ಆಂದೋಲನ ಹಮ್ಮಿಕೊಳ್ಳುವುದಾಗಿ ಎಚ್ಚರಿಸಿದರು.

