ರಾಷ್ಟ್ರಭಕ್ತಿಯ ಪ್ರತೀಕವಾದ ‘ವಂದೇ ಮಾತರಂ’ ಗೀತೆಯನ್ನು ಮೊಟಕುಗೊಳಿಸಿ ಕೇವಲ ಎರಡು ಚರಣಗಳಿಗೆ ಸೀಮಿತಗೊಳಿಸಿರುವ ರಾಜ್ಯ ಸರ್ಕಾರದ ನಿರ್ಧಾರವನ್ನು ಖಂಡಿಸಿ ಬಿಜೆಪಿ ವತಿಯಿಂದ ತೀವ್ರ ಪ್ರತಿಭಟನೆ ನಡೆಸಲಾಯಿತು.


ರಾಷ್ಟ್ರಭಕ್ತಿಯ ಪ್ರತೀಕವಾದ ವಂದೇ ಮಾತರಂ ಗೀತೆಯನ್ನು ಮೊಟಕುಗೊಳಿಸಿರುವ ರಾಜ್ಯ ಸರ್ಕಾರದ ನಿಲುವನ್ನು ಖಂಡಿಸಿ ಬಿಜೆಪಿ ವತಿಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ವಂದೇ ಮಾತರಂ ಎಂದು ಘೋಷಣೆಗಳನ್ನು ಕೂಗುತ್ತ ಪ್ರತಿಭಟನಾ ಮೆರವಣಿಗೆಯನ್ನು ನಡೆಸಲಾಯಿತು.(ಫ್ಲೋ)
ಬಿಜೆಪಿ ರಾಜ್ಯ ಉಪಾಧ್ಯಕ್ಷ ಎಂ.ನಾಗರಾಜ್ ಅವರು ಕಾಂಗ್ರೆಸ್ಸಿನ ತುಷ್ಠಿಕರಣದ ನೀತಿಯ ವಿರುದ್ಧ ವಿಶೇಷವಾಗಿ ಕಾಂಗ್ರೆಸ್ ಆಡಳಿತದ ರಾಜ್ಯಗಳಲ್ಲಿ ವಂದೇ ಮಾತರಂನ ಸಂಪೂರ್ಣ 6 ಚರಣಗಳನ್ನು ಹಾಡಬೇಕೆಂದು ರಾಜ್ಯ ಮತ್ತು ಲೋಕಸಭೆಯಲ್ಲಿ ವಿಧೇಯಕವನ್ನು ಪಾಸ್ ಮಾಡಲಾಗಿದೆ. ವಂದೇ ಮಾತರಂ ಗೀತೆ ಸ್ವಾತಂತ್ರ್ಯ ಹೋರಾಟದಲ್ಲಿ ಮಹತ್ವದ ಪಾತ್ರವನ್ನು ವಹಿಸುತ್ತದೆ. ರಾಷ್ಟ್ರೀಯ ಮಟ್ಟದ ಪದಾಧಿಕಾರಿಗಳ ಸಭೆಯಲ್ಲಿಯೂ ಕೂಡ ನಿರ್ಣಯವನ್ನು ಕೈಗೊಳ್ಳಲಾಗಿದೆ. ಕಾಂಗ್ರೆಸ್ಸಿನ ಧೋರಣೆಯನ್ನು ಬಿಜೆಪಿ ಖಂಡಿಸುತ್ತದೆ. ರಾಷ್ಟ್ರಗೀತೆಗೆ ಕಾಂಗ್ರೆಸ್ ಸಂಪೂರ್ಣ ಗೌರವವನ್ನು ಸಲ್ಲಿಸಬೇಕೆಂದು ಒತ್ತಾಯಿಸಿದರು.
ರಾಜ್ಯದಲ್ಲಿರುವ ಕಾಂಗ್ರೆಸ್ ಸರಕಾರವು ಸ್ವಾತಂತ್ರ್ಯ ಹೋರಾಟದ ಕಿಚ್ಚು ಹಚ್ಚಿದ ‘ವಂದೇ ಮಾತರಂ’ ಗೀತೆಗೆ ಹಾಗೂ ಸ್ವಾತಂತ್ರ್ಯ ಹೋರಾಟಗಾರರಿಗೆ ಅಪಮಾನ ಮಾಡುತ್ತಿದ್ದು, ಕೇವಲ 2 ಚರಣಗಳನ್ನು ಮಾತ್ರ ಹಾಡಬೇಕೆಂಬ ಆದೇಶವನ್ನು ಬಿಜೆಪಿ ತೀವ್ರವಾಗಿ ಖಂಡಿಸುತ್ತದೆ. ಸ್ವಾತಂತ್ರ್ಯ ಹೋರಾಟದಂತೆ ಆರು ಚರಣಗಳನ್ನು ಕಡ್ಡಾಯವಾಗಿ ಹಾಡಲು ಸರಕಾರವು ತನ್ನ ಆದೇಶವನ್ನು ತಿದ್ದುಪಡಿ ಮಾಡಬೇಕು, ಇಲ್ಲದಿದ್ದರೆ ರಾಜ್ಯಾದ್ಯಂತ ಬಿಜೆಪಿ ವತಿಯಿಂದ ತೀವ್ರ ಹೋರಾಟವನ್ನು ಹಮ್ಮಿಕೊಳ್ಳಲಾಗುವುದು ಎಂದು ಬಿಜೆಪಿ ಗ್ರಾಮಾಂತರ ಅಧ್ಯಕ್ಷ ಸುಭಾಷ ಪಾಟೀಲ್ ಎಚ್ಚರಿಕೆಯನ್ನು ನೀಡಿದರು.
ಈ ವೇಳೆ ಬಿಜೆಪಿ ನಗರಾಧ್ಯಕ್ಷೆ ಗೀತಾ ಸುತಾರ್, ಮಾಜಿ ಶಾಸಕ ಅರವಿಂದ ಪಾಟೀಲ್, ಮಹಾಂತೇಶ ದೊಡ್ಡಗೌಡರ ಸೇರಿದಂತೆ ಇನ್ನುಳಿದವರು ಭಾಗಿಯಾಗಿದ್ಧರು.
