Vijaypura

ವಿಜಯಪುರ ಜಿಲ್ಲೆಯನ್ನು ಸಂಪೂರ್ಣ ಬರ ಪೀಡಿತ ಜಿಲ್ಲೆ ಎಂದು ಘೋಸಿಸಲು ಮನವಿ

Share

ವಿಜಯಪುರ ಜಿಲ್ಲೆಯನ್ನು ಸಂಪೂರ್ಣ ಬರಪಿಡಿತ ಜಿಲ್ಲೆ ಎಂದು ಘೋಷಣೆ ಮಾಡಬೇಕು ಎಂದು ಆಗ್ರಹಿಸಿ, ವಿಜಯಪುರದ ಜಿಲ್ಲಾಧಿಕಾರಿಗಳ ಕಚೇರಿಯ ಮುಂದೆ ಅಖಂಡ ಕರ್ನಾಟಕ ರೈತ ಸಂಘ ವತಿಯಿಂದ ಪ್ರತಿಭಟನೆಮಾಡಿ ಜಿಲ್ಲಾಧಿಕಾರಿ ಗಳ ಮೂಲಕ ಮುಖ್ಯ ಮಂತ್ರಿಗಳಿಗೆ ಮನವಿ ಸಲ್ಲಿಸಿದರು.

ನಂತರ ಮಾಧ್ಯಮ ಜೊತೆ ಮಾತನಾಡಿದ ರೈತ ಮುಖಂಡ ಅರವಿಂದ ಕುಲಕರ್ಣಿ ಸರ್ಕಾರ ವಿಜಯಪುರ ಜಿಲ್ಲೆಯಲ್ಲಿ ಕೇವಲ ಮೂರು ತಾಲೂಕಗಳನ್ನು ಮಾತ್ರ ಬರಪೀಡಿತ ತಾಲೂಕು ಎಂದು ಘೋಷಣೆ ಮಾಡಿದ್ದಾರೆ. ಇನ್ನು ಉಳಿದ ಹತ್ತು ತಾಲೂಕುಗಳಿಗೆ ಅನ್ಯಾಯವಾಗಿದೆ ಕೂಡಲೇ ಬಾಕಿ ಉಳಿದ ತಾಲೂಕುಗಳನ್ನು ಸೇರಿಸಿಕೊಂಡು ಸಂಪೂರ್ಣ ಜಿಲ್ಲೆಯನ್ನು ಬರಪೀಡಿತ ಜಿಲ್ಲೆ ಎಂದು ಘೋಷಣೆ ಮಾಡಬೇಕು ಎಂದು ಆಗ್ರಹಿಸಿದರು. ಒಂದು ವೇಳೆ ಸರ್ಕಾರ ಜಿಲ್ಲೆಗೆ ಅನ್ಯಾಯ ಮಾಡಿದರೆ ಮುಂದಿನ ದಿನಗಳಲ್ಲಿ ರಾಜಕಾರಣಿಗಳ ಮನೆಯ ಮುಂದೆ ಬಾರುಕೋಲು ಚಳುವಳಿ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

 

Tags:

error: Content is protected !!