ಸಂಪೂರ್ಣ ವಿಜಯಪುರ ಜಿಲ್ಲೆ ಬರಪೀಡಿತ ಎಂದು ಘೋಷಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾ ಘಟಕದಿಂದ ಸೆಪ್ಟೆಂಬರ್ 2ರಿಂದ ಅನಿರ್ಧಿಷ್ಟಾವಧಿ ಧರಣಿ ಸತ್ಯಾಗ್ರಹ ನಡೆಸಲು ಮುಂದಾಗಿದ್ದಾರೆ.

ವಿಜಯಪುರ ಜಿಲ್ಲೆಯ 13 ತಾಲೂಕುಗಳ ಪೈಕಿ ವಿಜಯಪುರ, ನಿಡಗುಂದಿ, ಕೊಲ್ಹಾರ 3 ತಾಲೂಕು ಮಾತ್ರ ಬರಪೀಡಿತ ತಾಲೂಕು ಎಂದು ಘೋಷಿಸಿದ್ದಾರೆ. ವಿಜಯಪುರ ಜಿಲ್ಲೆಯಲ್ಲೇ ಬರ ಆವರಿಸಿದ್ದು ರಾಜ್ಯ ಸರ್ಕಾರ ಅವೈಜ್ಞಾನಿಕ ನೀತಿಯಿಂದಾಗಿ ಕೇವಲ 3 ತಾಲೂಕು ಘೋಷಣೆ ಮಾಡಿದ್ದು ಖಂಡನೀಯ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದರು. ಇಂದಿನಿಂದ ರೈತಪರ ಮಹಿಳಾ ಪರ ಸೇರಿದಂತೆ ಹಲವು ಸಂಘಟನೆಗಳ ನೇತೃತ್ವದಲ್ಲಿ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ನಡೆಸಲಿದ್ದು, ವಿಜಯಪುರ ಜಿಲ್ಲೆ ಬರಪೀಡಿತ ಜಿಲ್ಲೆ ಎಂದು ಘೋಷಿಸುವವರೆಗೂ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ನಡೆಸುತ್ತೇವೆ ಎಂದು ರೈತರು ಎಚ್ಚರಿಕೆ ನೀಡಿದ್ದಾರೆ…
