Chikkodi

ಶಾರ್ಟ್ ಸರ್ಕ್ಯೂಟ್‌ನಿಂದ 30 ಎಕರೆ ಕಬ್ಬು ಭಸ್ಮ, ಲಕ್ಷಾಂತರ ರೂ. ನಷ್ಟ

Share

ಚಿಕ್ಕೋಡಿ: ತಾಲೂಕಿನ ಕಾಡಾಪುರ ಗ್ರಾಮದ ಹೊರವಲಯದಲ್ಲಿ ಸಂಭವಿಸಿದ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಭಾರಿ ಪ್ರಮಾಣದ ಬೆಂಕಿ ಕಾಣಿಸಿಕೊಂಡಿದ್ದು, ಸುಮಾರು 30 ಎಕರೆ ಕಬ್ಬಿನ ಬೆಳೆ ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದೆ. ಘಟನೆಯಿಂದಾಗಿ ರೈತರಿಗೆ ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದೆ.

 

ಸ್ಥಳೀಯ ರೈತರಾದ ನಾರಾಯಣ ಕೋರೆ, ಸುರೇಶ್ ಕೋರೆ, ನೇತಾಜಿ ಜಾಧವ, ಸಿದ್ದಪ್ಪ ಕರಿಗಾರ ಹಾಗೂ ರಾಮಾ ಢಂಗ ಅವರಿಗೆ ಸೇರಿದ ಜಮೀನುಗಳಲ್ಲಿ ಬೆಳೆದು ನಿಂತಿದ್ದ ಕಬ್ಬು ಅಗ್ನಿಗಾಹುತಿಯಾಗಿದೆ. ವಿದ್ಯುತ್ ತಂತಿಯಲ್ಲಿ ಉಂಟಾದ ಶಾರ್ಟ್ ಸರ್ಕ್ಯೂಟ್ ಬೆಂಕಿ ಅವಘಡಕ್ಕೆ ಕಾರಣ ಎನ್ನಲಾಗಿದೆ.

 

ಘಟನೆಯ ಸುಳಿವು ಸಿಗುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ, ಸ್ಥಳೀಯ ಗ್ರಾಮಸ್ಥರ ಸಕಾಲಿಕ ನೆರವಿನೊಂದಿಗೆ ಸುಧೀರ್ಘ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ಹತೋಟಿಗೆ ತಂದಿದ್ದಾರೆ. ಪರಿಶ್ರಮದಿಂದ ಕಷ್ಟಪಟ್ಟು ಬೆಳೆದ ಬೆಳೆ ಕಣ್ಣೆದುರೇ ನಾಶವಾಗಿರುವುದರಿಂದ ಸಂಕಷ್ಟಕ್ಕೊಳಗಾಗಿರುವ ರೈತರು ಸೂಕ್ತ ಪರಿಹಾರ ನೀಡುವಂತೆ ಸರ್ಕಾರ ಹಾಗೂ ಸಂಬಂಧಪಟ್ಟ ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ.

Tags:

error: Content is protected !!