hubbali

ದಾಂಡಿಯಾದಲ್ಲಿ ಅನ್ಯಕೋಮಿನವರಿಗೆ ಎಂಟ್ರಿ ಆರೋಪ; ಭಜರಂಗ ದಳ, ಶ್ರೀರಾಮ ಸೇನೆ ಆಕ್ರೋಶ

Share

ಹುಬ್ಬಳ್ಳಿಯಲ್ಲಿ ದಾಂಡಿಯಾ ಕಾರ್ಯಕ್ರಮದಲ್ಲಿ ಅನ್ಯಕೋಮಿನವರಿಗೆ ಅನುಮತಿ ನೀಡಿರುವುದನ್ನು ವಿರೋಧಿಸಿ ಭಜರಂಗದಳ ಹಾಗೂ ಶ್ರೀರಾಮಸೇನೆ ಮುಖಂಡರು ಸ್ಥಳಕ್ಕೆ ಭೇಟಿ ನೀಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾದ ಹಿನ್ನೆಲೆಯಲ್ಲಿ, ಕೇಶ್ವಾಪುರ ಪೊಲೀಸರು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದು ಪರಿಸ್ಥಿತಿ ತಿಳಿಗೊಳಿಸಿದ್ದಾರೆ

 

ದಾಂಡಿಯಾ ಕಾರ್ಯಕ್ರಮದಲ್ಲಿ ಅನ್ಯಕೋಮಿನವರಿಗೆ ಅನುಮತಿ ನೀಡಿರುವುದನ್ನು ವಿರೋಧಿಸಿ ಭಜರಂಗದಳ ಹಾಗೂ ಶ್ರೀರಾಮಸೇನೆ ಮುಖಂಡರು ದಾಂಡಿಯಾ ಸ್ಥಳಕ್ಕೆ ಭೇಟಿ ನೀಡಿ ವಿರೋಧ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಹಲವಾರು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.

ದಾಂಡಿಯಾ ಕಾರ್ಯಕ್ರಮದಲ್ಲಿ ಅನ್ಯಕೋಮಿನವರಿಗೆ ಅನುಮತಿ ನೀಡಿದ್ದಾರೆ ಎಂದು ಆರೋಪಿಸಿ ಪ್ರತಿಭಟನೆ ನಡೆಸಿದ್ದಾರೆ. ಸ್ಥಳಕ್ಕೆ ಕೇಶ್ವಾಪುರ ಪೊಲೀಸರು ಭೇಟಿ ನೀಡಿ ಕಾರ್ಯಕರ್ತರನ್ನು ವಶಕ್ಕೆ ಪಡೆದು ಪರಿಸ್ಥಿತಿ ತಿಳಿಗೊಳಿಸಿದ್ದಾರೆ.

Tags:

error: Content is protected !!