khanapur

ಹಲಗಾ ಗ್ರಾಮದಲ್ಲಿ ಅಂಗನವಾಡಿ ಕಟ್ಟಡದ ಭೂಮಿ ಪೂಜೆ ಸಲ್ಲಿಸಿದ ಶಾಸಕ ವಿಠ್ಠಲ ಹಲಗೇಕರ

Share

ಆಂಕರ್ -ಖಾನಾಪೂರ ತಾಲೂಕಿನ ಹಲಗಾ ಗ್ರಾಮದಲ್ಲಿ ನೂತನ ಅಂಗನವಾಡಿ ಕಟ್ಟಡದ ಭೂಮಿಪೂಜೆ ನೆರವೇರಿತು

ಈ ಅಂಗನವಾಡಿ ಕಟ್ಟಡದ ನಿರ್ಮಾಣಕ್ಕಾಗಿ ಶಾಸಕರ ನಿಧಿಯಿಂದ ₹20 ಲಕ್ಷ ಅನುದಾನ ಮಂಜೂರು ಮಾಡಲಾಗಿದೆ.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ವಿಠ್ಠಲ ಹಲಗೇಕರ ಅವರು ಗ್ರಾಮೀಣ ಪ್ರದೇಶದ ಮಕ್ಕಳಿಗೆ ಸುರಕ್ಷಿತ ಹಾಗೂ ಸುಸಜ್ಜಿತ ವಾತಾವರಣವನ್ನು ಒದಗಿಸುವುದರ ಜೊತೆಗೆ, ಅವರ ಶೈಕ್ಷಣಿಕ ಮತ್ತು ಬೌದ್ಧಿಕ ಬೆಳವಣಿಗೆಗೆ ಉತ್ತೇಜನ ನೀಡುವುದು ಈ ಉಪಕ್ರಮದ ಮುಖ್ಯ ಉದ್ದೇಶವಾಗಿದೆ.

ನೂತನ ಅಂಗನವಾಡಿ ಕಟ್ಟಡದ ನಿರ್ಮಾಣದಿಂದ ಗ್ರಾಮದ ಪುಟ್ಟ ಮಕ್ಕಳಿಗೆ ಉತ್ತಮ ಸೌಲಭ್ಯಗಳು ದೊರೆಯಲಿವೆ ಎಂಬ ವಿಶ್ವಾಸವಿದೆ.

ಮಕ್ಕಳ ಉಜ್ವಲ ಭವಿಷ್ಯ ಮತ್ತು ಗ್ರಾಮದ ಸರ್ವಾಂಗೀಣ ಅಭಿವೃದ್ಧಿಗೆ ಮೊದಲು ಆದ್ಯತೆ ನೀಡಲಾಗುವುದು ಎಂದು ಶಾಸಕ ವಿಠ್ಠಲ ಹಲಗೇಕರ ಅವರು ಹೇಳಿದರು

ಅಲ್ತಾಫ್ ಎಂ ಬಸರೀಕಟ್ಟಿ
ಇನ್ ನ್ಯೂಸ್ ಖಾನಾಪೂರ

 

Tags:

error: Content is protected !!