Chikkodi

ಪ್ರತಿ ಬ್ಲಾಕ್‌ನಲ್ಲಿ ಕಾರ್ಯಕರ್ತರ ಅಭಿಪ್ರಾಯ ಪಡೆದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ನೇಮಕ: ವಿನಯ ನಾವಲಗಟ್ಟಿ

Share

ಸಂಘಟನಾ ಸೃಜನ ಅಭಿಯಾನದ ಮೂಲಕ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರನ್ನು ಪ್ರತಿ ಬ್ಲಾಕ್‌ನಲ್ಲಿ ಕಾರ್ಯಕರ್ತರ ಅಭಿಪ್ರಾಯ ಪಡೆದು ನೇಮಕ ಮಾಡಲಾಗುವುದು ಎಂದು ಕೆಪಿಸಿಸಿ ವೀಕ್ಷಕರಾದ ವಿನಯ ನಾವಲಗಟ್ಟಿ ತಿಳಿಸಿದ್ದಾರೆ.

ಚಿಕ್ಕೋಡಿ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂಘಟನಾ ಸೃಜನ ಅಭಿಯಾನ-೧ರ ಮೂಲಕ ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಕಾರ್ಯಕರ್ತರ ಅಭಿಪ್ರಾಯ ಪಡೆದುಕೊಂಡು ರಾಜ್ಯದಲ್ಲಿ 30 ಜಿಲ್ಲಾ ಘಟಕಗಳಿಗೆ ಜಿಲ್ಲಾ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ ಎಂದರು. ಆಕಾಂಕ್ಷಿಗಳಿಗೆ ಈಗಾಗಲೇ ಫಾರ್ಮ್ ವಿತರಣೆ ಮಾಡಲಾಗಿದೆ ಎಂದು ತಿಳಿಸಿದ ಅವರು, ನಾಲ್ಕು ಜನ ಕೆಪಿಸಿಸಿ ವೀಕ್ಷಕರು ಪ್ರತಿ ವಿಧಾನಸಭಾ ಕ್ಷೇತ್ರಗಳಿಗೆ ಭೇಟಿ ನೀಡಿ ಪ್ರತಿಯೊಬ್ಬ ಕಾರ್ಯಕರ್ತರಿಂದ ಅಭಿಪ್ರಾಯ ಸಂಗ್ರಹಿಸಿ ಎಐಸಿಸಿ ಹಾಗೂ ಕೆಪಿಸಿಸಿಗೆ ವರದಿ ನೀಡಲಾಗುವುದು ಎಂದರು.
ರಾಜ್ಯದಲ್ಲಿ ಎಐಸಿಸಿ ಅಧ್ಯಕ್ಷರ ಸೂಚನೆ ಮೇರೆಗೆ ಪ್ರತಿ ಗ್ರಾಮ ಹಾಗೂ ಬೂತ್ ಮಟ್ಟದಲ್ಲಿ ಪಕ್ಷ ಸಂಘಟನೆ ಮಾಡಲಾಗುವುದು ಎಂದು ಅವರು ಹೇಳಿದರು.

ಮುಂದಿನ ದಿನಗಳಲ್ಲಿ ನಿಷ್ಠಾವಂತ ಕಾರ್ಯಕರ್ತರಿಗೆ ನಿಗಮ ಮಂಡಳಿ ಅಧ್ಯಕ್ಷ ಹುದ್ದೆಯನ್ನು ಮುಖ್ಯಮಂತ್ರಿಗಳು ನೀಡಲಿದ್ದಾರೆ ಎಂದ ಅವರು, ವಿಧಾನ ಪರಿಷತ್‌ನಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಸೋಲಿಗೆಾನಾ ಕಾರಣಗಳಿವೆ ಮತ್ತು ಇದರ ಬಗ್ಗೆ ಹೈಕಮಾಂಡ್ ಸತಶೋಧನಾ ಸಮಿತಿ ರಚಿಸಿ ಸೋಲಿಗೆ ಕಾರಣ ಕಂಡು ಹಿಡಿಯಲಿದೆ ಎಂದರು. ಮುಂಬರುವ ದಿನಗಳಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಲು ಕಾರ್ಯಕರ್ತರು ಸಜ್ಜಾಗಿರುವಂತೆ ಅವರು ಕರೆ ನೀಡಿದರು.

ಸುದ್ದಿಗೋಷ್ಠಿಯಲ್ಲಿ ಮಾಜಿ ಸಚಿವ ವೀರಕುಮಾರ ಪಾಟೀಲ, ಕೆಪಿಸಿಸಿ ವೀಕ್ಷಕರಾದ ಸುನೀಲ ಹಣಮನ್ನವರ, ಅಲ್ತಾಪ ಹಳೂರ, ಚಿಕ್ಕೋಡಿ ಜಿಲ್ಲಾ ಕಾಂಗ್ರೆಸ್ ಸಮಿತಿ ಜಿಲ್ಲಾಧ್ಯಕ್ಷ ಲಕ್ಷ್ಮರಾವ ಚಿಂಗಳೆ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಹಾವೀರ ಮೋಹಿತೆ, ಸಿದ್ದಕಿ ಅಂಕಲಗಿ,ಎಚ್.ಎಸ್. ನಸಲಾಪುರೆ, ರಾಜು ಕೋಟಗಿ, ಶಂಕರಗೌಡ ಪಾಟೀಲ, ಸಿದ್ದಾರ್ಥ ಶಿಂಗೇ, ಸತೀಶ ಕುಲಕರ್ಣಿ ಮುಂತಾದವರು ಉಪಸ್ಥಿತರಿದ್ದರು.

Tags:

error: Content is protected !!