ಬೈಕ್ ಸವಾರನ ನಿಯಂತ್ರಣ ತಪ್ಪಿ ಬೈಕ್ ಸ್ಕಿಡ್ ಆದ ಪರಿಣಾಮ ಇಬ್ಬರು ಯುವಕರು ಗಂಭೀರವಾಗಿ ಗಾಯಗೊಂಡ ಘಟನೆ ವಿಜಯಪುರ ಜಿಲ್ಲೆಯ ದೇವರಹಿಪ್ಪರಗಿ ತಾಲೂಕಿನ ಮಾರ್ಕಪ್ಪನಹಳ್ಳಿ ಕ್ರಾಸ್ ಬಳಿ ನಡೆದಿದೆ. ಅಪಘಾತದಲ್ಲಿ ಬಸವನಬಾಗೇವಾಡಿ ಪಟ್ಟಣದ ಬಸವನನಗರ ನಿವಾಸಿ ಸಿದ್ದರಾಮ ಹೂವಿನಳ್ಳಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮತ್ತೊಬ್ಬ ಗಾಯಾಳು ಬಸವರಾಜ ಮಿಣಜಗಿಗೆ ಹೆಚ್ಚಿನ ಚಿಕಿತ್ಸೆಗಾಗಿ ಮಹಾರಾಷ್ಟ್ರದ ಮಿರಜ್ಗೆ ರವಾನಿಸಲಾಗಿದೆ.
ಈ ಘಟನೆ ಬಸವನಬಾಗೇವಾಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

