Khanapur

ಪಾರೀಶ್ವಾಡ-ಇಟಗಿ ರಸ್ತೆ ಡಾಂಬರೀಕರಣಕ್ಕೆ ಆಗ್ರಹ: ಸಚಿವ ಸತೀಶ ಜಾರಕಿಹೊಳಿ ಅವರಿಗೆ ಯುವ ಮುಖಂಡ ಭರತೇಶ ಮನವಿ

Share

ಖಾನಾಪುರ ತಾಲೂಕಿನ ಪಾರೀಶ್ವಾಡದಿಂದ ಇಟಗಿ ವರೆಗಿನ ರಸ್ತೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಸಂಚಾರಕ್ಕೆ ತೀವ್ರ ತೊಂದರೆಯಾಗಿದೆ. ಈ ಕೂಡಲೇ ರಸ್ತೆ ಅಭಿವೃದ್ಧಿಪಡಿಸುವಂತೆ ಯುವ ಮುಖಂಡ ಭರತೇಶ ತೊರೋಜಿ ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಅವರಿಗೆ ಮನವಿ ಸಲ್ಲಿಸಿದ್ದು, ಸಚಿವರು ಶೀಘ್ರ ಕಾಮಗಾರಿ ಆರಂಭಿಸುವ ಭರವಸೆ ನೀಡಿದ್ದಾರೆ.

ಖಾನಾಪುರ ತಾಲೂಕಿನ ಪಾರೀಶ್ವಾಡ ಗ್ರಾಮದಿಂದ ಇಟಗಿ ಗ್ರಾಮದ ವರೆಗೆ ಸಂಪರ್ಕ ಕಲ್ಪಿಸುವ ರಸ್ತೆ ಹಲವು ವರ್ಷಗಳಿಂದ ಸಮರ್ಪಕ ನಿರ್ವಹಣೆ ಕಾಣದೆ ಸಂಪೂರ್ಣ ಹದಗೆಟ್ಟಿದ್ದು, ಪ್ರತಿದಿನ ಸಂಚರಿಸುವ ಸಾರ್ವಜನಿಕರು, ಶಾಲಾ-ಕಾಲೇಜು ವಿದ್ಯಾರ್ಥಿಗಳು ಹಾಗೂ ರೈತರು ಭಾರಿ ತೊಂದರೆ ಅನುಭವಿಸುತ್ತಿದ್ದಾರೆ. ಈ ಪ್ರಮುಖ ರಸ್ತೆಯ ದುಸ್ಥಿತಿಯನ್ನು ಮನಗಂಡ ಕಾಂಗ್ರೆಸ್ ಯುವ ಮುಖಂಡ ಭರತೇಶ ತೊರೋಜಿ, ಜಿಲ್ಲಾ ಉಸ್ತುವಾರಿ ಹಾಗೂ ಲೋಕೋಪಯೋಗಿ ಇಲಾಖೆಯ ಸಚಿವ ಸತೀಶ ಜಾರಕಿಹೊಳಿ ಅವರನ್ನು ಭೇಟಿ ಮಾಡಿ ರಸ್ತೆ ಹಾಗೂ ಡಾಂಬರೀಕರಣ ಕಾಮಗಾರಿಯನ್ನು ಕೂಡಲೇ ಕೈಗೊಳ್ಳುವಂತೆ ಮನವಿ ಪತ್ರ ಸಲ್ಲಿಸಿದರು. ಮನವಿ ಸ್ವೀಕರಿಸಿದ ಸಚಿವರು ಸಾರ್ವಜನಿಕರ ಸಮಸ್ಯೆಗೆ ಸ್ಪಂದಿಸಿ, ಆದಷ್ಟು ಬೇಗನೆ ರಸ್ತೆ ಕಾಮಗಾರಿ ಆರಂಭಿಸಿ ಸಂಚಾರವನ್ನು ಸುಗಮಗೊಳಿಸುವುದಾಗಿ ಸಕಾರಾತ್ಮಕ ಭರವಸೆ ನೀಡಿದ್ದಾರೆ.

Tags:

error: Content is protected !!