Dharwad

ಧಾರವಾಡ: ಮೂವರು ಮಕ್ಕಳಿಗೆ ವಿಷವಿಕ್ಕಿ ತಾಯಿಯೂ ಸೇವನೆ – ಚಿಕಿತ್ಸೆ ಫಲಿಸದೆ ತಾಯಿ, ಮಗಳು ಸಾವು

Share

ತಾಯಿಯೊಬ್ಬರು ತಾನೇ ಹೆತ್ತ ಮೂವರು ಮಕ್ಕಳಿಗೆ ವಿಷದ ಮಾತ್ರೆ ನೀಡಿ, ತಾನೂ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ದಾರುಣ ಘಟನೆ ಧಾರವಾಡ ತಾಲೂಕಿನ ಕರಡಿಗುಡ್ಡ ಗ್ರಾಮದಲ್ಲಿ ಶನಿವಾರ ನಡೆದಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಕರಡಿಗುಡ್ಡ ಗ್ರಾಮದ ಸವಿತಾ ಕುರಗುಂದ (38) ವಿಷ ಸೇವಿಸಿದ ಮಹಿಳೆ. ಗದಿಗೆವ್ವ ಕುರಗುಂದ (8), ಭಾಗ್ಯಶ್ರೀ ಕುರಗುಂದ (6) ಹಾಗೂ ಹರ್ಷ (2) ವಿಷದ ಮಾತ್ರೆ ಸೇವಿಸಿದ ಮಕ್ಕಳು ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ತಾಯಿ ಸೇರಿದಂತೆ ನಾಲ್ವರ ಸ್ಥಿತಿ ಚಿಂತಾಜನಕವಾಗಿದ್ದು, ತಕ್ಷಣವೇ ಅವರನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಾಲ್ವರೂ ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದರೂ, ಶನಿವಾರ ರಾತ್ರಿ ಚಿಕಿತ್ಸೆ ಫಲಕಾರಿಯಾಗದೆ ತಾಯಿ ಸವಿತಾ ಹಾಗೂ ಮಗಳು ಗದಿಗೆವ್ವ (8) ಮೃತಪಟ್ಟಿದ್ದಾರೆ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಧಾರವಾಡ ಗ್ರಾಮೀಣ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆಗೆ ನಿಖರ ಕಾರಣವೇನೆಂಬುದು ಇನ್ನಷ್ಟೇ ತಿಳಿದುಬರಬೇಕಿದೆ. ಈ ಕುರಿತು ಧಾರವಾಡ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸದ್ಯ ಕಿಮ್ಸ್ ವೈದ್ಯರು ಉಳಿದ ಇಬ್ಬರು ಮಕ್ಕಳ ಜೀವ ಉಳಿಸಲು ಶ್ರಮಿಸುತ್ತಿದ್ದಾರೆ.

Tags:

error: Content is protected !!