ಮಹಾನವಮಿ ಹಾಗೂ ಆಯುಧ ಪೂಜೆಯ ಶುಭ ಸಂದರ್ಭದಲ್ಲಿ ರಾಜಧಾನಿಯ ವಿಧಾನಸೌಧದಲ್ಲೂ ದಸರಾ ಕಳೆ ಗಟ್ಟಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಇಂದು ತಮ್ಮ ಕಚೇರಿಯಲ್ಲಿ ಕುಟುಂಬ ಸಮೇತರಾಗಿ ಭಕ್ತಿಯಿಂದ ವಿಶೇಷ ಪೂಜೆ ಹಾಗೂ ಪ್ರಾರ್ಥನೆ ಸಲ್ಲಿಸಿದರು.
ಮಹಾನವಮಿ ಹಬ್ಬದ ಶುಭ ನಿಮಿತ್ತ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸೋಮವಾರ ವಿಧಾನಸೌಧದ ತಮ್ಮ ಅಧಿಕೃತ ಕಚೇರಿಯಲ್ಲಿ ಧಾರ್ಮಿಕ ವಿಧಿವಿಧಾನಗಳೊಂದಿಗೆ ಆಯುಧ ಪೂಜೆ ನೆರವೇರಿಸಿದರು. ಈ ವಿಶೇಷ ಸಂದರ್ಭದಲ್ಲಿ ತಮ್ಮ ಧರ್ಮಪತ್ನಿ ಉಷಾ ಅವರೊಂದಿಗೆ ಪಾಲ್ಗೊಂಡ ಡಿ.ಕೆ.ಶಿವಕುಮಾರ್ ಅವರು, ಕಚೇರಿಯ ಸಾಮಗ್ರಿಗಳು, ಉಪಕರಣಗಳು ಹಾಗೂ ವಾಹನಗಳಿಗೆ ಪೂಜೆ ಸಲ್ಲಿಸಿ, ರಾಜ್ಯದ ಜನತೆಗೆ ಒಳಿತಾಗಲಿ ಎಂದು ಪ್ರಾರ್ಥಿಸಿದರು. ಹಬ್ಬದ ವಾತಾವರಣದಿಂದ ಕಳೆಗಟ್ಟಿದ್ದ ವಿಧಾನಸೌಧದ ಕಚೇರಿಯಲ್ಲಿ ಈ ಧಾರ್ಮಿಕ ಕಾರ್ಯಕ್ರಮ ಸರಳ ಹಾಗೂ ಶ್ರದ್ಧಾಭಕ್ತಿಯಿಂದ ನೆರವೇರಿತು.
