Vijaypura

ಬರಗಾಲ ಹಾಗೂ ಸಾಲಬಾಧೆ ತಾಳಲಾರದೆ ರೈತ ಆತ್ಮಹತ್ಯೆ

Share

ಮಳೆ ಕೊರತೆ ಹಾಗೂ ಬೆಳೆ ಕೈಕೊಟ್ಟ ಪರಿಣಾಮ ಸಾಲದ ಸುಳಿಗೆ ಸಿಲುಕಿದ ರೈತನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಸೊನಕನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಸೊನಕನಹಳ್ಳಿ ಗ್ರಾಮದ ನೀಲಕಂಠ ರಾಯಪ್ಪ ಗೋಡಕೆ (30) ಆತ್ಮಹತ್ಯೆ ಮಾಡಿಕೊಂಡ ರೈತ. ಕೃಷಿಯನ್ನೇ ನಂಬಿಕೊಂಡಿದ್ದ ನೀಲಕಂಠ ಅವರು ಮಳೆ ಇಲ್ಲದೆ ಬೆಳೆ ಹಾನಿಯಾಗಿದ್ದರಿಂದ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದರು ಎನ್ನಲಾಗಿದೆ. ಸಾಲದ ಬಾಧೆಯಿಂದ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ.
ಘಟನೆ ಕುರಿತು ಇಂಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

Tags:

error: Content is protected !!